ನಾಗನಟಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಶಹಾಪುರ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಇಲಾಖೆಯ ಯೋಜನಾ ಅಡಿಯಲ್ಲಿ ರೂಪಿಸಿದ ವಿಸ್ತೃತ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ಪ್ರತಿಭೆ ಹೊರತರಲು ಸಹಕಾರಿಯಾಗಿದೆ ಎಂದು ತಾಲೂಕಿನ ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಸೂಡಿ ಹೇಳಿದರು.

ಉಮರದೊಡ್ಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಶಹಾಪೂರ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ನಾಗನಟಗಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿನೂತನವಾಗಿದ್ದು ಸಾಂಸ್ಕೃತಿಕ ಹಾಗೂ ಸಾಹಿತ್ಯಕವಾಗಿ ಶಾಲೆ,ಕ್ಲಸ್ಟರ್, ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಮಾನ್ಯ ವೇದಿಕೆಯಾಗಿದೆ ಎಂದರು.

ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಮೆಚ್ಚುಗೆ ಪ್ರಮಾಣ ಪತ್ರ ಮತ್ತು ಬಹುಮಾನಗಳನ್ನು ನೀಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ ಮತ್ತು ಮಕ್ಕಳಲ್ಲಿ ಸುಪ್ತ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಿದೆ ಎಂದರು.

ನಾಗನಟಗಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಧರ್ಮರಾಜ ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ ಮತ್ತು ವಿದ್ಯಾರ್ಥಿಯು ತನ್ನ ಪ್ರತಿಭೆಯನ್ನು

ತನ್ನ ಮುಂದಿನ ಭವಿಷ್ಯಕ್ಕಾಗಿ ರೂಪಿಸಿಕೊಳ್ಳಲು ಸಹಕಾರಿ ಯಾಗಿದೆ ಮತ್ತು ವಿದ್ಯಾರ್ಥಿಗಳು ವ್ಯಯಕ್ತಿಕವಾಗಿ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ದೊರೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮುಖ್ಯಗುರು ಗೋಪಿಚಂದ, ತಾಲೂಕು ನೌಕರರ ಸಂಘದ ಉಪಾಧ್ಯಕ್ಷ ಶಾಂತರೆಡ್ಡಿ ತುಂಬಗಿ, ಎಸ್,ಡಿ,ಎಮ್,ಸಿ,ಅಧ್ಯಕ್ಷ ಶಿವರೆಡ್ಡಿ, ಹಣಮಂತ್ರಾಯಗೌಡ ಪಾಟೀಲ್, ಗ್ರಾ.ಪಂ.ಸದಸ್ಯರಾದ ನಾಗಣ್ಣ, ಅಂಬ್ಲಮ್ಮ ಶರಣಪ್ಪ, ಬಾಪುಗೌಡ ಹೀರೇಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆ ವೀರೇಶ, ಭಾಗಮ್ಮ ಸ್ವಾಗತಿಸಿದರು, ವಂದನಾರ್ಪಣೆ ಶಾಂತಪ್ಪ ಮಾಡಿದರು. ಸಮಾರಂಭದಲ್ಲಿ ನಾಗನಟಗಿ ಕ್ಲಸ್ಟರ್ ನ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!