ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ
ಯಾದಗಿರಿ: ಕಲಬುರಗಿ, ಬೀದರ, ರಾಯಚೂರು, ಯಾದಗಿರಿ ಜಿಲ್ಲೆಯ ಮಾಜಿ ಸೈನಿಕರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡರ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸ್ವಯಂ ಲಿಖಿತ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಮಾಜಿ ಸೈನಿಕರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡರ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಇಚ್ಚೆಯುಳ್ಳವರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಲಬುರಗಿ ಕಛೇರಿಗೆ “ಸ್ವಯಂ ಲಿಖಿತ ಅರ್ಜಿಯನ್ನು” 2024ರ ನವೆಂಬರ್ 30ರ ಒಳಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಕಾಸ ಭವನ ಸಂಕೀರ್ಣ (ಮಿನಿ ವಿಧಾನ ಸೌಧ), ಸ್ಟೇಷನ್ ರಸ್ತೆ, ಕಲಬುರಗಿ 585 102 ಅಥವಾ ಇಮೇಲ್ sainikwelfareglb@yahoo.com ನಲ್ಲಿ ದೂ.ಸಂ.08472 225003 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.