ರಾಜ್ಯದಲ್ಲಿ ಈವರೆಗೆ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತ | 16644 ಗ್ರಾಮಗಳು ನೋಡಿ ಮುಕ್ತ ಅಧಿವೇಶನ ದಲ್ಲಿ ಸರ್ಕಾರದಿಂದ ಮಾಹಿತಿ

ಬೆಳಗಾವಿ : ಅರಣ್ಯ ಹಕ್ಕು ಕಾಯ್ದೆಯಡಿ ಈವರೆಗೆ ಸ್ವೀಕರಿಸಿದ ಅರ್ಜಿಗಳಲ್ಲಿ 16,665 ಪ್ರಕರಣಗಳಲ್ಲಿ ಹಕ್ಕು ಪತ್ರ ವಿತರಿಸಲಾಗಿ ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಒಟ್ಟು 2,59,199 ಅರ್ಜಿಗಳು ತಿರಸ್ಕೃತವಾಗಿದ್ದು, 23,583 ಅರ್ಜಿಗಳು ಮಾತ್ರ ಬಾಕಿ ಇರುತ್ತವೆ. ರಾಜ್ಯದಲ್ಲಿ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಾನಾ ಕಾರಣಗಳಿಂದ ನಿಧಾನ ಗತಿಯಲ್ಲಿರುತ್ತದೆ ಎಂದಿದ್ದಾರೆ.

ಅರ್ಜಿದಾರರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅರಣ್ಯ ಹಕ್ಕು ಸಮಿತಿಗಳ ಮುಂದೆ ಸಲ್ಲಿಸದಿರುವುದು. ಪರಿಶಿಷ್ಟ ಪಂಗಡಕ್ಕೆ ಸೇರಿರದ ಇತರೆ ಪಾರಂಪರಿಕ ಅರಣ್ಯವಾಸಿಗಳು 75 ವರ್ಷಗಳಿಂದ ಅರಣ್ಯ ಭೂಮಿ ಅವಲಂಬಿಸಿರುವ ಬಗ್ಗೆ ದಾಖಲೆ ಒದಗಿಸದೇ ಇರುವುದು.

ರಾಷ್ಟ್ರೀಯ ಅಭಯಾರಣ್ಯ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗುವುದಕ್ಕೂ ಮೊದಲೇ ಅರಣ್ಯವಾಸಿಗಳು ಸ್ಥಳಾಂತರ ಗೊಂಡಿರುವುದರಿಂದ ಅರ್ಜಿಗಳು ತಿರಸ್ಕೃತವಾಗಿವೆ.

ಉಪವಿಭಾಗ ಸಮಿತಿ (SDLC) ಮತ್ತು ಜಿಲ್ಲಾ ಮಟ್ಟದ ಸಮಿತಿ (DLC) ಗಳಲ್ಲಿ ನಾಮನಿರ್ದೇಶಿತ ತಾಲ್ಲೂಕು/ ಜಿಲ್ಲಾ ಪಂಚಾಯಿತಿ ಸದಸ್ಯರಿಲ್ಲದಿರುವ ಕಾರಣಗಳಿಂದ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಿಧಾನ ಗತಿಯಲ್ಲಿರುತ್ತದೆ ಎಂದು ತಿಳಿಸಿದರು.

16644 ಗ್ರಾಮಗಳು ನೋಡಿ ಮುಕ್ತ – ಕಂದಾಯ ಸಚಿವ ಕೃಷ್ಣ ಭೈರೇಗೌಡ: ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶ ನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಅವರು, ಭೂ ಮಾಪನ ಇಲಾಖೆ ಯಲ್ಲಿ ಕಳೆದ 3 ವರ್ಷಗಳಲ್ಲಿ ವಿ ವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.

ಈ ಹಿಂದೆ, ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯ ಗಳನ್ನು ಒದಗಿಸುವ ಮೂಲಕ ಚುರುಕುಗೊಳಿಸಿದ್ದು, ಪೋಡಿಗೆ ಯೋಗ್ಯವಾಗಿರುವ ಯಾವುದೇ ಪ್ರಕರಣಗಳನ್ನು ಸರಾಸರಿ ಒಂದು ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ: ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.

ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ.

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆ ಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!