ಕಲಬುರಗಿಯಲ್ಲಿ ಡಿ.22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಯದೇವ ಆಸ್ಪತ್ರೆ ಉದ್ಘಾಟನೆ | ಈ ಭಾಗದ ಬಡ ರೋಗಿಗಳಿಗೆ ಲಾಭ

ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ ಕಲಬುರಗಿಯಲ್ಲಿ‌ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆ. 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡಿದೆ. ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾ ಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ.

ಸುವ್ಯವಸ್ಥಿತ ಆಸ್ಪತ್ರೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ,ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ, ರಾಯಚೂರು ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಬೀದರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸೇರಿದಂತೆ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಸದಸ್ಯರು, ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾಥಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ ಎನ್ನಲಾಗಿದೆ.

ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ.‌

ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.

ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು ಹೀಗಿವೆ: 371 ಹಾಸಿಗೆ ಸಾಮ ರ್ಥ್ಯದ ಕಟ್ಟಡ, 3 ಕ್ಯಾಥ್‌ಲ್ಯಾಬ್‌ ಗಳು, 3 ಆಪರೇಷನ್ ಥಿಯೇಟ ರ್‌ಗಳು, 1 ಹೈಬ್ರಿಡ್ OT, 105 ICCU ಹಾಸಿಗೆಗಳು, 120 ಸಾಮಾನ್ಯ ವಾರ್ಡ್ ಬೆಡ್‌,  ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು, ಕಾರ್ಡಿಯಾಲಜಿ, ಕಾರ್ಡಿಯೋ ಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಹೊಂದಿದೆ.

Spread the love

Leave a Reply

Your email address will not be published. Required fields are marked *

error: Content is protected !!