ಮಾಸಿಕ 15 ಸಾವಿರ ಗೌರವಧನ ನೀಡಿ | ಆರೋಗ್ಯ ಚಿಕಿತ್ಸೆ ವೇಳೆ 3 ತಿಂಗಳ ವೇತನ ನೀಡಲು ಒತ್ತಾಯ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೇತನವನ್ನು 15 ಸಾವಿರ ರೂ. ಮಾಸಿಕ ವೇತನ ನಿಗದಿ ಮಾಡಬೇಕು, ನಿವೃತ್ತಿ ಹೊಂದುವವರಿಗೆ 5 ಲಕ್ಷ ನೀಡಬೇಕು, ಉಚಿತ ಆರೋಗ್ಯ ತಪಾಸಣೆ ನಡೆಸಬೇಕು, ಆರೋಗ್ಯ ಚಿಕಿತ್ಸೆ ಸಮಯದಲ್ಲಿ 3 ತಿಂಗಳ ಗೌರವಧನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಂಘದ ಜಿಲ್ಲಾಧ್ಯಕ್ಷೆ ಡಿ ಉಮಾದೇವಿ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರಣಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ 15 ಸಾವಿರ ರೂ. ಗಳ ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ವಿವಿಧ ಜಿಲ್ಲಾ ಮುಖನದರು ಮಾತನಾಡಿ, ಶ್ರಮಕ್ಕೆ ತಕ್ಕ ಪ್ರತಿಫಲ ಇಲ್ಲ. ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಚೇದಿತರನ್ನು ಆಶಾ ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್ ನಲ್ಲಿ ಆನ್ಲೈನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೇ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹ ಧನ ಸಿಗುತ್ತಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಮಿಸಿ, ಮನವಿ ಪತ್ರ ಸ್ವೀಕರಿಸಿ ಜನೆವರಿ 2 ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಒಳಗೊಂಡ ಜಿಲ್ಲಾ ಮಟ್ಟದ ಜಂಟಿ ಕುಂದುಕೊರತೆ ಸಭೆಯನ್ನು ಕರೆಯುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕಿದ್ದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗಳು ಸ್ವೀಕರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳು ಇದ್ದರು.

ಈ ಸಂದರ್ಭದಲ್ಲಿ ರಾಮಲಿಂಗಪ್ಪ ಬಿ.ಎನ್, ಪುಷ್ಪಲತಾ ಪಿ, ಅಶ್ವಿನಿ ಗಣಾಚಾರಿ, ನೀಲಮ್ಮ, ಸರಸ್ವತಿ, ಶಾಂತಮ್ಮ, ಮುನಿಯಮ್ಮ, ಚಂದಮ್ಮ, ಶ್ರೀದೇವಿ, ಗೌರಮ್ಮ, ಲಕ್ಷ್ಮೀ, ಜಯಶ್ರೀ, ಸಂಗೀತ, ಮಹಾದೇವಿ, ಅನಿತಾ, ಸಾಬಮ್ಮ, ಶಾರದಾದೇವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!