ಶಹಾಪೂರ: ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ 14 ವಯೋಮಾನದ ಬಾಲಕರ ವಿಭಾಗದ ಕಲಬುರಗಿ ವಿಭಾಗದಿಂದ ಶಹಾಪುರದ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ.
ಮೊದಲ ಪಂದ್ಯದಲ್ಲಿ ಬೆಳಗಾವಿ ವಿಭಾಗದ ತಂಡದೊಂದಿಗೆ ಆಟವಾಡಿ ಉತ್ತಮ ಪ್ರದರ್ಶನ ನೀಡುವ ಮೂಲಕ ವಿಜೇತಗೊಂಡ ತಂಡವು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ.
ಮಕ್ಕಳ ಸಾಧನೆಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು,. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಹಾಪೂರ ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕರು ಮತ್ತು ಶಾಲೆಯ ಮುಖ್ಯ ಗುರು ಹಣಮಂತರಾಯ ಸೋಮಪುರ್, ಎಸ್,ಡಿ,ಎಂ,ಸಿ,ಅಧ್ಯಕ್ಷರು ಸದಸ್ಯರು ಶಾಲಾ ಶಿಕ್ಷಕ ವೃಂದ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಶರಣಬಸವ ದೇಸಾಯಿ ಮತ್ತು ವೀರಭದ್ರ ಬಡಿಗೇರ್ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.