ಅರ್ಥಪೂರ್ಣವಾಗಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಇದೇ ಜನೆವರಿ 21ರಂದು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಮಾತನಾಡಿ,  ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸ ಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಈ ಜಯಂತಿ ಆಚರಿಸಲು ಹಾಗೂ ತಾಲೂಕು ಮಟ್ಟದಲ್ಲಿ, ಈ ಜಯಂತಿ ಆಚರಣೆಗೆ ಸಕಲ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲು ಹಾಗೂ ನುರಿತ ಉಪನ್ಯಾಸ ಕರನ್ನು ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು, ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಯಾ ಸಮಾಜದ ಮುಖಂಡರು, ಸಂಘ ಸಂಸ್ಥೆ ಗಳವರು ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.

ಈ ಸಭೆಯಲ್ಲಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸವ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ದೇಶಮುಖ್, ಸಮಾಜದ ಮುಖಂಡರಾದ ನಿಂಗಪ್ಪ ಜಾಲಗಾರ , ಮಲ್ಲಿಕಾರ್ಜುನ ಪೂಜಾರಿ , ಭೀಮರೆಡ್ಡಿ ಯರಗೋಳ, ದೇವಿಂದ್ರಪ್ಪ ಬಳ್ಳಿಚಕ್ರ, ಉಮೇಶ್ ಮುದ್ನಾಳ, ಕಳಸಪ್ಪ ಸಾವೂರ, ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಕೌಳೂರ, ಶರಣಪ್ಪ ಮೋಟ್ನಳ್ಳಿ, ಅಯ್ಯಪ್ಪ ನಾಯ್ಕೋಡಿ ಸೇರಿ ದಂತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!