ಯಾದಗಿರಿಯಲ್ಲಿ ಜನೆವರಿ 17 ರಿಂದ 20 ರ ವರೆಗೆ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್
ಯಾದಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಜಿಲ್ಲಾ ಸಂಸ್ಥೆ ಯಾದಗಿರಿ, ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ದ್ವಿತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಇದೇ ಜನವರಿ 17 ರಿಂದ 20 ರವರೆಗೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜನವರಿ 17 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದರ ಉದ್ಘಾಟನೆ ನಡೆಯಲಿದ್ದು, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಗೃಹ ಸಚಿವರು ಹಾಗೂ ಕರ್ನಾಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರು ಪಿ.ಜಿ.ಆರ್. ಸಿಂಧ್ಯ ಜಾಂಬೋರೇಟ್ ಕೈಪಿಡಿ ಬಿಡುಗಡೆ ಮಾಡುವರು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಅಧ್ಯಕ್ಷತೆ ವಹಿಸುವರು.
ಯಾದಗಿರಿ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಸುರೇಶ್ ಆರ್. ಸಜ್ಜನ್ ನೆನಪಿನ ಕಾಣಿಕೆ ವಿತರಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಶರಣ ಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರೀಯಾಂಕ ಖರ್ಗೆ, ಅರಣ್ಯ ಪರಿಸರ, ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ , ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ್ ತಂಗಡಗಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವರಾದ ಎನ್.ಎಸ್. ಬೋಸರಾಜು, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ, ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡಮನಿ, ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಮ್ ಖಾನ್, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್, ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್, ಕರ್ನಾಟಕ ವಿಧಾನ ಪರಿಷತ್ತು ವಿರೋದ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಚಂದ್ರಶೇಖರ ಬಿ.ಪಾಟೀಲ್, ಶಶಿಲ್ ನಮೋಶಿ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರ ಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿಪಾಟೀಲ್, ಜಿಲ್ಲಾಧಿಕಾರಿ ಡಾ.ಸುಶೀಲ ಬಿ., ಜಿ.ಪಂ. ಸಿಇಓ ಲವೀಶ ಒರಡಿಯಾ, ಎಸ್.ಪಿ ಪೃಥ್ವಿಕ್ ಶಂಕರ್, ಕಲ್ಬುರ್ಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಡಾ.ಆಕಾಶ್ .ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿ ತರಿರುವರು. ಜನವರಿ 17ರಂದು ಬೆಳಿಗ್ಗೆ 7: 30 ಗಂಟೆಗೆ ಜಾಂಬೋರೇಟ್ ರ್ಯಾಲಿಗೆ ಚಾಲನೆ ದೊರೆಯಲಿದೆ. ಜನವರಿ 17 ರಿಂದ 20ರವರೆಗೆ ಪ್ರತಿ ದಿನ ಮಕ್ಕಳ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.
ಜನೆವರಿ 20 ರಂದು ಸಂಜೆ 4 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಾಂಬೋರೇಟ್ ನ ಸಮಾರೋಪ ಸಮಾರಂಭ ನಡೆಯಲಿದೆ.