ಬೀದರ : ಮಕ್ಕಳು ಈ ದೇಶದ ನಿಜವಾದ ಸಂಪತ್ತು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಮತ್ತು ದೇಶವನ್ನು ಮುನ್ನಡಿಸುವರು ಆಗಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಬೀದರನ ಇಂದಿರಾಬಾಯಿ ಗುರುತ್ತಪ್ಪ ಶೇಟಿಕಾರ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಬೀದರ ಅವರು ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಪಾಠದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸಬೇಕು. ಪ್ರಶಸ್ತಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಬಹಳ ಮುಖ್ಯ,ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಇದು ಒಂದು ಉತ್ತಮ ವೇದಿಕೆ ಯಾಗಿದೆ, ಇಲ್ಲಿಂದ ಮುಂದೆ ರಾಜ್ಯ ಮಟ್ಟದಲ್ಲಿ ಭಾಗವಹಿಸ ಬಹುದು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಪೂಜ್ಯ ಡಾ. ಶಿವುಕುಮಾರ ಮಹಾಸ್ವಾಮಿಗಳು ಸಿದ್ಧಾರೂಢ ಮಠ (ಚಿದಾಂಬರ ಆಶ್ರಮ) ಬೀದರ, ಬೀದರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಪ್ರಸನ್ನ ಕುಮಾರ, ಬೀದರ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಶಿಕ್ಷಣಾಧಿಕಾರಿ ಬಸವಂತ ರಾಯ ಜಿಡ್ಡೆ, ಬೀದರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.