ಫೆ.10 ರಂದು ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಕಾಂಗ್ರೆಸ್ 12, ಜೆಡಿಎಸ್ 8, ಬಿಜೆಪಿಯ 2, 1 ಸ್ವತಂತ್ರ ಅಭ್ಯರ್ಥಿಗಳ ಬಲ

ಗುರುಮಠಕಲ್ : ಗುರುಮಠಕಲ್ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ 12 ಜನ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಚಪೆಟ್ಲಾ ತಿಳಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷ ಸ್ಥಾನ ಬಿಸಿಬಿ ಮಹಿಳಾ ಅಭ್ಯರ್ಥಿಗೆ ಮೀಸಲಿದ್ದು, ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಇಲ್ಲದಿರುವುದರಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದರು.

ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲಿಡುವುದರಿಂದ ಕಾಂಗ್ರೆಸ್ ನಲ್ಲಿ 3 ಜನ ಮಹಿಳಾ ಅಭ್ಯರ್ಥಿಗಳಿದ್ದು, ಪಕ್ಷದ ವರಿಷ್ಠರು, ನಾಯಕರ ತೀರ್ಮಾನದಂತೆ ರೇಣುಕಾ ವೀರಪ್ಪ ಪಡಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷದ 12 ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರು ನಮ್ಮ ಅಭ್ಯರ್ಥಿ ಗೆ ಮತ ನೀಡಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕಾರ್ಯದರ್ಶಿ ಸಂಜೀವ ಕುಮಾರ ಚಂದಾಪುರ, ಸದಸ್ಯರಾದ ಪಾಪಿರೆಡ್ಡಿ ಬುರ್ಜು, ಬಾಬು ತಿವಾರಿ, ರೇಣುಕಾ ವೀರಪ್ಪ ಪಡಿಗೆ, ಪವಿತ್ರ ಮನ್ನೆ, ಕೃಷ್ಣ ಮೇದ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!