ಬೆಂಗಳೂರು: ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಯಾದಗಿರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ವೈಐಎಂಎಸ್) ಆಡಳಿತ ಮಂಡಳಿ ಸಭೆ ಬುಧವಾರ ನಡೆಯಿತು.
ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್, ವೈಐಎಂಎಸ್ ನಿರ್ದೇಶಕ ಡಾ.ವಿ.ಎಚ್.ಸಂದೀಪ್ ಹಾಗೂ ಇತರರು ಉಪಸ್ಥಿತರಿದ್ದರು.
