ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಅಂಬೇಡ್ಕರ್ ಅವರ ಜಯಂತಿ ಆಚರಣೆ
ಯಾದಗಿರಿ: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿದ ಅವರು, ಮೇಲ್ವರ್ಗದವರಿಗೆ ಹೆಚ್ಚಿನ ಪ್ರಧಾನ್ಯತೆ ಇದ್ದ ವೇಳೆ ಹಿಂದುಳಿದವರಿಗೆ ಪ್ರಧಾನ್ಯತೆ ನೀಡಬೇಕಾದ ಅವಶ್ಯಕತೆ ಇತ್ತು.
ಕೇಂದ್ರ ಬಿಜೆಪಿ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಜನ್ಮ ಸ್ಥಳ, ಶಿಕ್ಷಣ ಪಡೆದ ಸ್ಥಳಗಳನ್ನು ರಕ್ಷಣೆ ಮಾಡಿ ಸಾರ್ವಜನಿಕರು ವೀಕ್ಷಣೆ ಮಾಡಲು ಅವಕಾಶ ನೀಡಿದೆ. ಮಹಾ ಪರಿನಿರ್ವಾಣದ ಸ್ಥಳ ರಕ್ಷಣೆ, ಬೌದ್ಧ ಧರ್ಮ ಸ್ವೀಕರಿಸಿದ ನಾಗಪುರ ಸ್ಥಳ ರಕ್ಷಣೆ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಮಹಾತ್ಕ್ಮಾರ್ಯವನ್ನು ಬಿಜೆಪಿ ಸರ್ಕಾರ ಮಾಡಿದೆ. ಅರ್ಥಶಾಸ್ತ್ರ ಅಂಬೇಡ್ಕರ್ಗೆ ಆಸಕ್ತಿ ಇದ್ದ ವಿಷಯವಾಗಿತ್ತು. ಆದರೆ ಅವರು ಕೇಂದ್ರದಲ್ಲಿ ಹಣಕಾಸು ಸಚಿವರಾಗಲು ಸಾಧ್ಯವಾಗಲಿಲ್ಲ.
ಯಾವುದೇ ಸರ್ಕಾರಗಳು ಬರಲಿ, ಒಳ್ಳೆಯರೇ ಬರಲಿ ಕೆಟ್ಟವರೇ ಬರಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ ಎಂದು ಅಂಬೇಡ್ಕರ್ ಅವರನ್ನು ಹಾಡಿ ಹೊಗಳಿದರು.
ಈ ಸಂದರ್ಭದಲ್ಲಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ ಮಾತನಾಡಿ, ಅಂಬೇಡ್ಕರ್ ಕೇವಲ ಎಸ್ ಸ್ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ಚವೆ ಮೆಚ್ಚುವಂತಹ ನಾಯಕ ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಈ ಸಂದರ್ಭದಲ್ಲಿ ಡಾ.ಮರೇಪ್ಪ ನಾಟೆಕಾರ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮತ್ತು ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿದ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಭೀಮಾಶಂಕರ ಬಿಲ್ಲವ್, ಬಸವರಾಜಪ್ಪಗೌಡ ಬಿಳಾರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ,ಯುಡ ಮಾಜಿ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ, ನಗರಸಭೆ ಸದಸ್ಯ ಸ್ವಾಮಿದೆವ ದಾಸನಕೇರಿ, ಮಾರುತಿ ಕಲಾಲ್, ಅಡಿವೆಪ್ಪ ಜಾಕ, ಸಿದ್ದಲಿಂಗಪ್ಪ ನಾಯಕ, ಮೋನೇಶ ಬೆಳಿಗೇರಿ, ಮಲ್ಲಿಕಾರ್ಜುನ ಹೊನಿಗೇರಿ, ಬಸಣಗೌಡ ಕನ್ಯಕೋಳುರ, ಶಕುಂತಲಾ ಜಿ,ಭೀಮಬಾಯಿ ಶೆಂಡಿಗಿ, ಸ್ನೇಹ ರಸಳಕರ್, ಮಲ್ಲು ಕೂಲಿವಾಡ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
