ಯಾದಗಿರಿ : ಅಕಾಲಿಕ ಮಳೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರ ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಅಕಾಲಿಕ ಮಳೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರ ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಸೀಲ್ದಾರರ, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ವೆಬ್‌ಸೈಟ್ http://yadgir.nic.in ನಲ್ಲಿ 2025ರ ಏಪ್ರಿಲ್ 29 ರಂದು ಪ್ರಕಟಿಸಲಾಗಿದ್ದು, ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲ್ಲೂಕು ಕಚೇರಿಗಳಲ್ಲಿ 7 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!