ಜೂನ್ 13ರಿಂದ 14ರವರೆಗೆ ಡ್ರೋನ್ ಹಾಗೂ ವಾಯುಯಾನಗಳ ಹಾರಾಟಕ್ಕೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಆದೇಶ
ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 14ರಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಿನಲ್ಲಿ ಡ್ರೋನ್ ಹಾಗೂ ವಾಯುಯಾನಗಳ ಹಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುಶೀಲ.ಬಿ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ವಾಯುಯಾನಗಳ ಹಾರಾಟವನ್ನು ಜೂನ್ 13 ರಿಂದ 14ರವರೆಗೆ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಕ್ತಾಯದವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
