ಯಾದಗಿರಿ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ನಡೆದ ಕಲ್ಲು ತೂರಾಟ ಮತ್ತು ಹಿಂಸಾಚಾರದ ಬಗ್ಗೆ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ಆತಂಕ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್, ಮದ್ದೂರಿನ
ಗಲಭೆಗೆ ಕಾರಣರಾದವರನ್ನು ಪತ್ತೆಹಚ್ಚಿ, ಅವರಿಗೆ ನಿಷ್ಪಕ್ಷಪಾತವಾಗಿ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಾಮಾನ್ಯ ಜನತೆ ದ್ವೇಷದ ಪ್ರಚಾರಕ್ಕೆ ಬಲಿಯಾಗದೆ ತಮ್ಮ ಕೋಮು ಸಾಮರಸ್ಯ ಹಾಗೂ ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು ಮತ್ತು ಇಂತಹ ಘಟನೆಗಳ ರಾಜಕೀಯ ದುರ್ಲಾಭ ಪಡೆಯಲು ರಾಜಕೀಯ ಪಕ್ಷ ಮತ್ತು ಸಂಘಟನೆಗಳಿಗೆ ಯಾವುದೇ ಅವಕಾಶವನ್ನು ಜಿಲ್ಲಾಡಳಿತ ನೀಡಬಾರದು ಎಂದು ಎಸ್ಯುಸಿಐ(ಸಿ) ಒತ್ತಾಯಿಸುತ್ತದೆ.
