ಗುರುಮಠಕಲ್:  ತಾಲೂಕಿನ ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.

ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಶರಣಮ್ಮ  ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮಾತನಾಡಿ, ಚಿಕ್ಕ ಮಕ್ಕಳು ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರದ ಸೇವನೆ ಪ್ರಮುಖವಾಗಿದೆ ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಮಾತನಾಡಿ, ಸ್ವಾಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನದ ಅಂಗವಾಗಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. PHCO ಜ್ಯೋತಿ ಮಾತನಾಡಿ,  ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ವೈಯಕ್ತಿಕ ಸ್ವಚ್ಛತೆ, ಕುಟುಂಬ ಕಲ್ಯಾಣ ವಿಧಾನಗಳ, ಕುರಿತು ಮಾಹಿತಿಯನ್ನು ನೀಡಿದರು.

ಅಂ.ಕಾ. ಗೌರಮ್ಮ ಸೀಮಂತ ಕಾರ್ಯಕ್ರಮ ನೆರವೇರಿಸಿದರು. ಸಿಹೆಚ್ಓ ಸಂತೋಷ್, ಚನ್ನಮ್ಮ, ನರಸಿಂಗಮ್ಮ ,ಮಹದೇವಮ್ಮ ಅಂಗನವಾಡಿ ಕಾರ್ಯಕರ್ತರು ಹಾಗೂ ತುಳಜಮಾ ಆಶಾ ಕಾರ್ಯಕರ್ತರು ಹಾಗೂ ಗ್ರಾಮದ ಗರ್ಭಿಣಿಯರು ತಾಯಂದಿರು, ಮಕ್ಕಳು ,ಹಿರಿಯರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!