ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ನವೆಂಬರ್ 11 ರಂದು ಒಣಕೆ ಓಬವ್ವ ಜಯಂತಿ ಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಒಣಕೆ ಓಬವ್ವ ಜಯಂತಿ ಹಿನ್ನೆಲೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಅಂದು ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಉಪನ್ಯಾಸ ನೀಡಲು ನುರಿತ ಉಪನ್ಯಾಸಕರನ್ನು ಆಹ್ವಾನಿಸಬೇಕು. ಯಾವುದೇ ಲೋಪ ಆಗದಂತೆ ಕಾರ್ಯಕ್ರಮ ವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಂದು ಕಾರ್ಯಕ್ರಮದ ಸಿದ್ಧತೆಗೆ ವಹಿಸಲಾದ ಜವಾಬ್ದಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಕಾಲಿಕ್ಕೆ ನಿಭಾಯಿಸಬೇಕು. ಸಮಾಜ ಬಾಂಧವರು ಹಾಗೂ ವಿವಿಧ ಇಲಾಖೆಗಳ ಸಹಕಾರದಿಂದ ಯಶಸ್ವಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅವರು ಸೂಚಿಸಿದರು.

ಇಂದು ನಡೆದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ವೀರನಗೌಡಾ,ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜಾಹೀರುಲ್ ಹಸನ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ದೇಶಮುಖ, ಮಕ್ಕಳ ರಕ್ಷಣಾ ಅಧಿಕಾರಿ ಪ್ರೇಮಮೂರ್ತಿ,ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರ, ಕಾರ್ಮಿಕ ಅಧಿಕಾರಿ ಶ್ರೀಹರಿ ಸೈದಪ್ಪ ಕೂಲುರ್,ಗೋಪಾಲ್ ತಳಿಗೇರಿ,ಮರೆಪ್ಪ ಚಟ್ಟೇರಕರ್,ನಿಂಗಣ್ಣ,ಪರಮೇಶ್ವರ ಹಾಗೂ ಇತರ ಸಮಾಜದ ಮುಖಂಡರು,ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!