ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಸಿ ಬಿ ದೇವರಮನಿ ನೇತೃತ್ವ | ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಸಿ ಬಿ ದೇವರಮನಿ ಅವರ ನೇತೃತ್ವದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಗುರುಮಠಕಲ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 27 ರಂದು ಕರ ವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯತಿಯಿಂದ 2 ಲಕ್ಷ ರೂಪಾಯಿ ಕರವಸೂಲಿ ಗುರಿ ತಲುಪಬೇಕು ಎಂದು ಸೂಚಿಸಿದರು.
ಈ ವೇಳೆ ಗುರುಮಠಕಲ್ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಶ್ ಪಾಟೀಲ್, ಮನರೇಗಾ ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ಪಂಚಾಯತ್ ರಾಜ್ ತಾಲೂಕು ಸಹಾಯಕ ನಿರ್ದೇಶಕ ಶರಣಪ್ಪ ಮೈಲಾರಿ ಸರ್, ತಾಲೂಕು ಯೋಜನಾಧಿಕಾರಿ ಭಾರತಿ ಸಜ್ಜನ್, ಎಫ್ ಡಿ ಎ ವಿದ್ಯಾಸಾಗರ ಕುಲಕರ್ಣಿ, ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸಲಿಗಾರರು, ಗ್ರಂಥ ಪಾಲಕರು, ಎನ್ ಆರ್ ಎಲ್ ಎಂ ಸಿಬ್ಬಂದಿ ವರ್ಗದವರು, ನರೇಗಾ ಮತ್ತು ತಾ.ಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.
