ವಿವಿಧ ಕಾಮಗಾರಿಗಳು ವೀಕ್ಷಿಸಿದ ಲವೀಶ್ ಓರಾಡಿಯಾ | ಗುರುಮಠಕಲ್ ತಾಲೂಕಿನ ಪುಟಪಾಕ ಗ್ರಾ.ಪಂ.ಗೆ ಭೇಟಿ
ಯಾದಗಿರಿ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಅವರು ಪುಟಪಾಕ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರೊಂದಿಗೆ ಗ್ರಾಮದ ಸಮಸ್ಯೆಗಳ ಕುರಿತು ಸಭೆ ನಡೆಸಿದರು.
2025-26ನೇ ಸಾಲಿನ ಕ್ರಿಯಾ ಯೋಜನೆ ಪರಿಶೀಲಿಸಿದರು. ಕುಡಿಯುವ ನೀರು, ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿಗಳ ವೇತನ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಕಟ್ಟಡ, ಕೂಸಿನ ಮನೆ, ವಸತಿ ನಿಲಯಗಳಲ್ಲಿ ಮೂಲಸೌಕರ್ಯ ವೀಕ್ಷಿಸಿದರು.
ಸರ್ಕಾರಿ ಪ್ರೌಢಶಾಲೆ, ಉರ್ದು ಶಾಲೆ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಿಜಿಸ್ಟರ್ ತಪಾಸಣೆ ನಡೆಸಿದರು. ಶುದ್ಧ ಕುಡಿಯುವ ನೀರಿನ ಘಟಕಗಳು, ಮನರೇಗಾದಡಿ ಕೈಗೊಂಡಿರುವ ಕಾಮಗಾರಿಗಳು, ಜೆಜೆಎಮ್ ಕಾಮಗಾರಿಗಳು ಪರಿಶಿಲೀಸಿದರು.
ಈ ಸಂದರ್ಭದಲ್ಲಿ ಗುರುಮಠಕಲ್ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಶ್ ಪಾಟೀಲ್, ಮತ್ತು ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ಪಿಡಿಓ ಭೀಮರಾಯ ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.
