ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಹೇಳಿಕೆ | ಬಿಜೆಪಿ ನಗರ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟನೆ

ಯಾದಗಿರಿ: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಉತ್ತಮ‌ ಭವಿಷ್ಯವಿದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರರಾವ್ ತಿಳಿಸಿದರು.

ನಗರದ ಎನ್.ವಿ.ಎಂ.ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಬಿಜೆಪಿಯಿಂದ ಆಯೋಜಿಸಿದ್ದ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ, ನಗರ ಮಂಡಲ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿ, ಬೂತ್ ಮಟ್ಟದಲ್ಲಿ ಜವಾಬ್ದಾರಿ ಇರುವವರು ಮತದಾರರೊಂದಿಗೆ ನಿಕಟ ಸಂಪರ್ಕವನ್ನು ಸಾಧಿಸಬೇಕು ಸಲಹೆ ನೀಡಿದರು. ಕೇಂದ್ರದಲ್ಲಿ ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ‌ ನೇತೃತ್ವದ ನಮ್ಮ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದೆ ಎಂದರು. ಇಂದು ಮಧ್ಯಪ್ರಾಚ್ಯ ರಾಷ್ಟ್ರಗಳು ಯುದ್ಧದಿಂದ ತತ್ತರಿಸಿವೆ.‌ ಇದರಿಂದ ಕಚ್ಚಾತೈಲಗಳ ಬೆಲೆ ಆಯಾ ರಾಷ್ಟ್ರಗಳಲ್ಲಿ ಹೆಚ್ಚಾಗಿವೆ. ಆ ದೇಶದ ಪ್ರಜೆಗಳು ಬೆಲೆ ಏರಿಕೆಯಿಂದ ತೊಂದರೆಯಲ್ಲಿದ್ದಾರೆ. ಆದರೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಏರಿಕೆಯಾಗಿಲ್ಲ.‌ ಇದು ನಮ್ಮ ಪ್ರಧಾನಿಗಳ ಕಾರ್ಯವೈಖರಿ ಎಂದು ಹೇಳಿದರು.

ಕೇಂದ್ರದಲ್ಲಿ ಆಡಳಿತ ‌ನಡೆಸುತ್ತಿರುವ ಪ್ರಧಾನಿ‌ ಮೋದಿ ಅವರು ದೇಶವನ್ನು ಕಟ್ಟಲು ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲೂ ಸಹ ಮುಂದಿನ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು.‌ ಈ‌ನಿಟ್ಟಿನಲ್ಲಿ ಪಕ್ಷದಿಂದ ಇಂಥ ವರ್ಗಗಳನ್ನು‌ ನಡೆಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ದೇವಿಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರುಕುಂದಿ, ಪ್ರಶಿಕ್ಷಣ ಮಹಾಭಿಯಾನ ಜಿಲ್ಲಾ ಸಂಚಾಲಕ ಮೌನೇಶ ಬೇಳಿಗೆರಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತಿಮನಿ ಸೇರಿದಂತೆ ನಗರ ಮಂಡಲ ಪದಾಧಿಕಾರಿಗಳು ಮತ್ತು ರಾಮಸಮುದ್ರ ಶಕ್ತಿ ಕೇಂದ್ರ ಪದಾಧಿಕಾರಿಗಳ ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!