ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯ | ಮಕ್ಕಳಿಗೆ ನೀರಿನ ಬಾಟಲ್ ವಿತರಣೆ
ಗುರುಮಠಕಲ್ : ಗಡಿ ಭಾಗದ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಸಲಕರಣೆ ವಿತರಿಸಲಾಗುತ್ತಿದೆ ಎಂದು ವಾಸವಿ ವನಿತಾ ಕ್ಲಬ್ ಅಧ್ಯಕ್ಷೆ ಮಹಾಲಕ್ಷ್ಮೀ ಕೆ. ಹೇಳಿದರು.
ಇಲ್ಲಿನ ಸರ್ಕಾರಿ ಹಿರಿಯ ಪಾಥಮಿಕ ಶಾಲೆ ಹರಿಜನವಾಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿ, ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಅಡಗಿರುತ್ತದೆ, ಅವರ ಪ್ರತಿಭೆ ಹೊರತಲು ಸೂಕ್ತ ವೇದಿಕೆ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಕ್ಲಬ್ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಲಿದೆ ಎಂದರು.
ಮುಖ್ಯ ಶಿಕ್ಷಕಿ ಕಲಾವತಿ ಮಾತನಾಡಿ, ಬಡ ಮಕ್ಕಳಿಗೆ ಸಹಕಾರ ನೀಡುತ್ತಿರುವುದಕ್ಕೆ ಧನ್ಯವಾದ ಹೇಳಿದರು. ಇದೇ ವೇಳೆ ಶಾಲೆಯಿಂದ ಮಹಾಲಕ್ಷ್ಮೀ ಕೆ ಅವರನ್ನು ಸನ್ಮಾನಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಭೀಮಶಪ್ಪ ಮೀನಿಂಟಿ, ಉಪಾಧ್ಯಕ್ಷೆ ಸುನೀತಾ ಗೂಡ್ಸೆ, ಸದಸ್ಯ ಹಣಮಂತು ಪಾಲಮೂರಿ, ಶಿಕ್ಷಕರಾದ ಮಲ್ಲಮ್ಮ, ಕವಿತಾ, ನವಿತಾ ಇದ್ದರು.
ನೀರಿನ ಬಾಟಲ್ ವಿತರಣೆ: ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ 30 ಬಾಟಲ್ ವಿತರಣೆ ಮಾಡಲಾಯಿತು. ಅಧ್ಯಕ್ಷೆ ಮಹಾಲಕ್ಷ್ಮಿ ಮಾತನಾಡಿ, ತಾವು ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ್ದು, ಹಾಗಾಗಿ ಇಲ್ಲಿನ ಬಡ ಮಕ್ಕಳಿಗೆ ಅನುಕೂಲವಾಗಲು ಕುಡಿಯುವ ನೀರಿನ ಬಾಟಲ್ ವಿತರಣೆ ಮಾಡಲಾಯಿತು ಎಂದರು. ದೈಹಿಕ ಶಿಕ್ಷಕ ಅನೀಲ ದೋರನಹಳ್ಳಿ ಇತರರು ಉಪಸ್ಥಿತರಿದ್ದರು.
