ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದರು. ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ 5 ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಿ ಸತ್ಕರಿಸಲಾಗುವುದು ಎಂದರು. ಹೆಸರು ನೋಂದಣಿ ಕಡ್ಡಾಯವಾಗಿ ಮಾಡಿಸಬೇಕು. ನೋಂದಣಿ ವೇಳೆ ಆನ್ ಲೈನ್ ಅಂಕಪಟ್ಟಿ, ವಿದ್ಯಾರ್ಥಿಗಳ ಭಾವಚಿತ್ರ, ವಿದ್ಯಾರ್ಥಿ ಹೆಸರು ನೀಡಬೇಕು ಎಂದು ಹೇಳಿದರು.

ಸಂಘದ ಜಿಲ್ಲಾ ಖಜಾಂಚಿ ರಾಜು ನಲ್ಲಿಕರ್ (ಮೊ. 9880195256 ) ಅವರನ್ನು ಸಂಪರ್ಕ ಮಾಡಿ ಏಪ್ರಿಲ್ 28ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ನಂತರ ನೋಂದಣಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ನಿಗದಿತ ದಿನಾಂಕದೊಳಗೆ ಸಂಘದ ಸದಸ್ಯರು ತಮ್ಮ‌ ಮಕ್ಕಳು ಎಸ್ ಎಸ್ ಎಲ್ ಸಿ ಪಾಸಾದ ಮಕ್ಕಳ ಮಾಹಿತಿ ನೀಡಿ ನೋಂದಾಯಿಸಬೇಕು ಎಂದರು. ನೋಂದಣಿ ಪ್ರಕ್ರಿಯೇ ಮುಗಿದ ಬಳಿಕ ಶೀಘ್ರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುವುದು ಹೇಳಿದರು.

Spread the love

Leave a Reply

Your email address will not be published. Required fields are marked *

error: Content is protected !!