192 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ | 96ರಲ್ಲಿ ಮಮತೆ ತೋರಿದ ಮತದಾರ | ಒಟ್ಟು 293 ಸ್ಥಾನಗಳಿಗೆ 2 ಹಂತದಲ್ಲಿ ನಡೆದಿದ್ದ ಮತದಾನ | ಮೇ.4 ರಂದು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ

ಕೊಲ್ಕತ್ತ: ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಸೇರಿ 5 ರಾಜ್ಯಗಳ ಫಲಿತಾಂಶ ಮೇ.4 ರಂದು ಹೊರಬೀಳಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ ಶಾ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೇರಿದಂತೆ ಬಿಜೆಪಿ ಸ್ಟಾರ್ ಪ್ರಚಾರಕರ ಶ್ರಮ ಫಲಿಸುವ ಲಕ್ಷಣಗಳು ಕಂಡು ಬರುತ್ತಿವೆ.

ಮಧ್ಯಾಹ್ನ 1 ಗಂಟೆ ವರೆಗೆ 192 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 96 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆಯ ಲ್ಲಿರುವುದು ಕಂಡು ಬರುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ಸಾಕಷ್ಟು ದೌರ್ಜನ್ಯ ನಡೆಸುತ್ತಿದ್ದ ಟಿಎಂಸಿ ಕಾಲ ಅಂತ್ಯಗೊಂಡು ಬಿಜೆಪಿ ಐತಿಹಾಸಿಕ ಗೆಲುವಿನ ನಗೆ ಬೀರುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದು ಸಮಾಜಗಳು ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಿದ್ದು, ಸಂಭ್ರಮದ ವಾತಾವರಣ ಮನೆ ಮಾಡಿದೆ. ಮಹಿಳೆಯರು ಹೆಚ್ಚಾಗಿ ರಸ್ತೆಗಿಳಿದು ತಿಲಕವಿಟ್ಟು, ಸಿಹಿ ಹಂಚಿ ಸಂಭ್ರಮ ಪಡುತ್ತಿದ್ದಾರೆ.

ಅಸ್ಸಾಂನಲ್ಲಿ 98 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 26 ಸ್ಥಾನಗಳಲ್ಲಿ ಮುಂದೆಯಿದೆ. ಕೇರಳದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೆ, ಪುದುಚೇರಿಯಲ್ಲಿ ಬಿಜೆಪಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಮುನ್ನಡೆಯಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬರಲಿದ್ದು, ಅಂತಿಮವಾಗಿ ಯಾರು ಎಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನುವುದು ತಿಳಿದು ಬರಲಿದೆ.

Spread the love

Leave a Reply

Your email address will not be published. Required fields are marked *

error: Content is protected !!