ಹುಮನಾಬಾದ್ : ತಾಲೂಕಿನ ವರವಟ್ಟಿ (ಕೆ) ಗ್ರಾಮದಲ್ಲಿ ಮಹಾರಾಣಾ ಪ್ರತಾಪ್ ಸಿಂಗ್ ರಜಪೂತ ಟ್ರಸ್ಟ್ (ರಿ) ವತಿಯಿಂದ ವೀರ ಶಿರೋಮಣಿ ಮಹಾರಾಣಾ ಪ್ರತಾಪ್ ಸಿಂಗ್ ರವರ 486ನೇ ಜಯಂತ್ಯೋತ್ಸವವನ್ನು ಗುರುವಾರ ಸಂಜೆ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ.

ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಹುಮನಾಬಾದ್ ಶಾಸಕ ಡಾ. ಸಿದ್ದಲಿಂಗಪ್ಪ (ಸಿದ್ಡು) ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ರಾಜಶೇಖರ ಬಿ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ಹಾಗೂ ಭೀಮರಾವ್ ಪಾಟೀಲ್, ಮತ್ತು ಭಾ.ಜ.ಪಾ ಸಹ-ಪ್ರಭಾರಿ (ಕಲಬುರಗಿ) ಈಶ್ವರಸಿಂಗ್ ಠಾಕೂರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಅತಿಥಿಗಳಾಗಿ ಮಾಜಿ ಶಾಸಕ ಸುಭಾಷ ಕಲ್ಲುರ, ಉದ್ಯಮಿ ಸಂತೋಷ ಪಾಟೀಲ್, ಯುವ ಮುಖಂಡ ಚಂದ್ರಸಿಂಗ್ ಮನ್ನಾಎಖೇಳ್ಳಿ ಸೇರಿದಂತೆ ಬೀದರ ಮತ್ತು ಕಲಬುರಗಿ ಜಿಲ್ಲೆಯ ರಜಪೂತ ಸಮಾಜದ ಮುಖಂಡರು, ಸ್ಥಳೀಯ ಗ್ರಾಮ ಪಂಚಾಯತ್ ಮಾಜಿ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಭವ್ಯ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪತ್ರಿಕಾ ಪ್ರಕಟಣೆ ಮೂಲಕ ಆಯೋಜಕರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!