ಯಾದಗಿರಿ: ಕೋಟ್ಪಾ ಕಾಯ್ದೆ 2003ರನ್ವಯ ಶಾಲಾ ಆರವಣದ 100 ಮೀ.ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದು ಅಪರಾದವಾಗಿದೆ ಎಂದು ಯಾದಗಿರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ್ ತಿಳಿಸಿದ್ದಾರೆ.
ಜಿಲ್ಲೆಯ ಶಹಾಪೂರ ತಾಲೂಕಿನಲ್ಲಿ ಸಾರ್ವಜನಿಕ ಪಾಠ ಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮದಡಿ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಮಕ್ಕಳಿಂದ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಮಕ್ಕಳಿಂದ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಅರಿವು ಮೂಡಿಸಲಾಯಿತು.
ಶಾಲಾ ಸಿಬ್ಬಂದಿ ಮತ್ತು ಮಕ್ಕಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಅರಿವು ಜಾಗೃತಿ ಮೂಡಿಸಲಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.