ಜಿಲ್ಲಾ ನ್ಯಾಯಾಲಯ ಆವರಣದಲ್ಲಿ  ಕ್ರಿಕೆಟ್ ಪಂದ್ಯಾವಳಿ |  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯಾ ಹೆಚ್ ಜೆ ಚಾಲನೆ

ಯಾದಗಿರಿ : ನ್ಯಾಯಾಲಯದ ಸಿಬ್ಬಂದಿಗಳು ಕೆಲಸದ ಒತ್ತಡದಿಂದ ಹೊರಬಂದು ಮಾನಸಿಕವಾಗಿ ಸಂತೋಷವಾಗಿರಲು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಮತ್ತು ಮನೋರಂಜನೆ ಅತ್ಯಂತ ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯಾ ಹೆಚ್ ಜೆ ಹೇಳಿದರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇದೇ  ಸಂದರ್ಭದಲ್ಲಿ ಕ್ರಿಕೆಟ್ ತಂಡದ ಕ್ರೀಡಾಪಟುಗಳಿಗೆ ಟಿ-ಶರ್ಟ್‌ಗಳನ್ನು ವಿತರಿಸಿದರು.

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಿಬ್ಬಂದಿಗಳಲ್ಲಿ ಉತ್ಸಾಹ, ಸ್ನೇಹಭಾವ ಹಾಗೂ ತಂಡದ ಮನೋಭಾವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.  ಸಿಬ್ಬಂದಿಗಳಲ್ಲಿ ಕ್ರೀಡಾ ಮನೋಭಾವ, ಪರಸ್ಪರ ಸೌಹಾರ್ದತೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಜಗದೀಶ್ ಕಿತ್ತೂರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಅರುಣ್ ಚೌಗುಲೆ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಸಿ ಎಸ್ ಮಾಲಿಪಾಟೀಲ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದು. ನ್ಯಾಯಾಲಯದ ವಿವಿಧ ವಿಭಾಗಗಳ ಸಿಬ್ಬಂದಿಗಳು ಹಾಗೂ ಕ್ರಿಕೆಟ್ ತಂಡದ ಕ್ರೀಡಾಪಟುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!