ಗೋಗಿಯಲ್ಲಿ ರಾಷ್ಟ್ರೀಯ ಏಕತಾ ದಿನ | ಗುಂಡೇಕರ್ ರಾಮಚಂದ್ರರಾವ್ ಅಭಿಪ್ರಾಯ

ಶಹಾಪೂರ : ಗೋಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಜಯಂತಿ ಹಾಗೂ ರಾಷ್ಟ್ರೀಯ ಏಕತಾ ದಿನವನ್ನು  ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಹೊನ್ನಪ್ಪ ಎಂ.ಪಿ. ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜೀವನ, ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಹಾಗೂ ದೇಶದ ವಿವಿಧ ಸಂಸ್ಥಾನಗಳನ್ನು ಏಕೀಕರಣಗೊಳಿಸುವಲ್ಲಿ ವಹಿಸಿದ ಮಹತ್ವದ ಪಾತ್ರವನ್ನು ವಿವರಿಸಿದರು. ರಾಷ್ಟ್ರೀಯ ಏಕತೆಯ ಮಹತ್ವವನ್ನು ತಿಳಿಸಿದ ಅವರು, ಪಟೇಲರ ಆದರ್ಶಗಳು ಇಂದಿನ ಯುವಜನರಿಗೆ ಪ್ರೇರಣೆಯಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಗುಂಡೇಕರ್ ರಾಮಚಂದ್ರರಾವ್ ಮಾತನಾಡಿ, ದೇಶದ ಏಕತೆ, ಸಮಗ್ರತೆ, ಸಹೋದರತ್ವ ಹಾಗೂ ರಾಷ್ಟ್ರೀಯ ಭಾವೈಕ್ಯತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ದೇಶದ ಏಕತೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ರಾಷ್ಟ್ರೀಯ ಏಕತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕ ಕಾಮಣ್ಣ ಜೆ.ಕೆ., ಬನ್ನಮ್ಮ, ಶರಣಪ್ಪ ಹೊಸಮನಿ, ಅಶೋಕ, ಸವಿತಾ ಟೋಕಾಪುರ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!