ಅ. 26ರಂದು ಗುರುವಂದನಾ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮ
ಗುರುಮಠಕಲ್: ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1984-85 ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮ ಆಯೋಜಿಸಲಾಗಿದೆ.
ಖಾಸಾಮಠದ ಪೂಜ್ಯ ಶ್ರೀ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು ,ಆ ಅವಧಿಯಲ್ಲಿ ಬೋಧಿಸಿದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಗುರುವಂದನಾ ಸಲ್ಲಿಸಲಾಗುವುದು.
ಕಾರ್ಯಕ್ರಮದಲ್ಲಿ ಪಟ್ಟಣದ ವಿವಿಧ ರಂಗದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕ
ಪಾಂಡು ಮೇದಾ, ಮುಖೇಶ್ ಪತಂಗೆ ಹಾಗೂ ಗುರು ಮುತ್ತಗಿ ತಿಳಿಸಿದ್ದಾರೆ.