ಮಕ್ಕಳ ದಿನಾಚರಣೆ ಅಂಗವಾಗಿ ಕನ್ಯಾ ಪ್ರೌಢ ಶಾಲೆಯಲ್ಲಿ ಕಾನೂನು ಅರಿವು
ಯಾದಗಿರಿ : ಪ್ರತಿ ವಿದ್ಯಾರ್ಥಿಗಳ ಕರ್ತವ್ಯ. ಸಾಮಾನ್ಯವಾಗಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಸಮಾಜಿಮುಖಿ ಕಾರ್ಯಗಳನ್ನು ಕೈಗೊಳ್ಳಲು ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದುವುದು ಅವಶ್ಯಕವಾಗಿದೆ ಎಂದು ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀ ಮರಿಯಪ್ಪ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಕನ್ಯಾ ಪ್ರೌಢ ಶಾಲೆ, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಇರುವ ಏಕೈಕ ಅಸ್ತ್ರ ಎಂಬ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.
ಪ್ರತಿವರ್ಷವು ಸಹ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ದಿನದ ಮಹತ್ವವೇನು ಎಂಬುದನ್ನು ತಿಳಿಯುವುದು ಮುಖ್ಯ. ವಿದ್ಯಾರ್ಥಿಗಳಿಗೆ ಸಾಧಕರ ಜೀವನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಎಲ್ಲರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಕೊಳ್ಳಬೇಕು ಎಂದರು.
ಮಕ್ಕಳು ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಸತ್ಪ್ರಜೆಗಳಾಗಬೇಕು. ಎಲ್ಲಾ ನಾಗರಿಕರೂ ಸಹ ಮಕ್ಕಳ ಮನೋಭಾವನೆ ಹೊಂದಿದಾಗ ಹೊಸತನವನ್ನು ಕಲೆಯಲು ಅನುಕೂಲವಾಗುತ್ತದೆ.
ಕಾನೂನುಗಳು ಪ್ರಜೆಗಳ ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ಆಸೋಹೊಕ್ಕಾಗಿರುತ್ತದೆ. ಕಾನೂನು ಬಾಹಿರ ಕೃತ್ಯಗಳನ್ನು ಎಸಗಿದಾಗ ಶಿಕ್ಷೆಗೆ ಒಳಗಾಗಬೇಕಾಗಿರುತ್ತದೆ. ಬಾಲ್ಯ ವಿವಾಹ ತಡೆಗಟ್ಟುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗಲ್ಪಡುವ ಮಕ್ಕಳನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಎಂದರು.
ವಿದ್ಯಾರ್ಥಿಗಳು ತಮ್ಮ ಸಹಪಾಟಿಗಳಿಗೆ ಅಥವಾ ತಮ್ಮ ಸಂಬಂಧಿಕರಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ 1098 ಅಥವಾ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕೆಂದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಬಸಮ್ಮ ಶೀನೂರು, ಪ್ಯಾನೆಲ್ ವಕೀಲ ಎಮ್.ಡಿ ಕಲಿಮೊದ್ದಿನ್ನ್, ಶಾಲೆಯ ಸಹ ಶಿಕ್ಷಕರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿಗಳು ಉಪಸ್ಥಿತರಿದ್ದರು.