ಯಾದಗಿರಿ : ಜಿಲ್ಲೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಸಭೆ ಜರುಗಿಸಿ ಮತದಾರರ ಪಟ್ಟಿ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಎಲ್ಲಾ ತಾಲ್ಲೂಕಿನ ಮತಗಟ್ಟೆಗಳಲ್ಲಿಯೂ ಸಹ ಪ್ರಚುರ ಪಡಿಸಿದೆ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರಾದ ಡಾ. ಹಂಪಣ್ಣ ಸಜ್ಜನ್ ಹೇಳಿದರು.

ಶನಿವಾರ ರಂದು ಸಹಾಯಕ ಆಯುಕ್ತರ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ರಾಜಕೀಯ ಪಕ್ಷದವರೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಸಭೆ ಜರುಗಿಸಿ ಮತದಾರರ ಪಟ್ಟಿ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ 2024ರ ಅಕ್ಟೋಬರ್ 29 ರಿಂದ 2024ರ ನವೆಂಬರ್ 15ರ ವರೆಗೆ ಸ್ವೀಕೃತವಾದ ನಮೂನೆಗಳ ಮಾಹಿತಿಯ ನಮೂನೆ 9, 10, 11, 11ಎ ಮತ್ತು 11ಬಿ ನಮೂನೆ, 36-ಸುರಪೂರ, 37-ಶಹಾಪೂರ, 38-ಯಾದಗಿರಿ, 39-ಗುರುಮಠಕಲ್ ವಿಧಾನಸಭಾ ಕ್ಷೇತ್ರವಾರು ಅಇಔ ವೆಬ್‌ಸೈಟ್‌ನಲ್ಲಿ Uಠಿಟoಚಿಜ ಮಾಡಿದ್ದು, ಸಹಾಯಕ ಆಯುಕ್ತರ ಕಛೇರಿಯಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಂಬಂಧಪಟ್ಟ ಮತಗಟ್ಟೆಗಳಲ್ಲಿಯೂ ಸಹ ಪ್ರಚುರ ಪಡಿಸಲಾಗಿದ್ದು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಎಮ್. ಈಟಿ, ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಂಕರ ಸೊನಾರ, ಯಾದಗಿರಿ ಜೆ.ಡಿ.ಎಸ್ ಪಕ್ಷದ (ಎಸ್.ಸಿ) ಘಟಕ ಜಿಲ್ಲಾಧ್ಯಕ್ಷರ  ಶಾಂತಪ್ಪ ಡಿ. ಜಾದವ್ ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!