ಯಾದಗಿರಿಧ್ವನಿ.ಕಾಮ್ ಡಿಜಿಟಲ್ ಮಾಧ್ಯಮದ ಮೂಲಕ ಶ್ರೀಯುತ ಅನೀಲ್ ಎನ್. ಬಸೂದೆ ಅವರು ದೇಶ-ವಿದೇಶ, ರಾಜ್ಯ, ಜಿಲ್ಲೆ ಹಾಗೂ ಗ್ರಾಮೀಣ ಭಾಗದ ಆಗು-ಹೋಗುಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದಾರೆ.
2007 ರಿಂದಲೇ ಪತ್ರಿಕಾ ಕ್ಷೇತ್ರದಲ್ಲಿ ಆಸಕ್ತಿಯಿಂದ ಪತ್ರಕರ್ತ ವೃತ್ತಿ ಆರಂಭಿಸಿ, ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ವರದಿಗಾರ, ಜಿಲ್ಲಾ ವರದಿಗಾರರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಉಪ ಸಂಪಾದಕ ಹುದ್ದೆಯಲ್ಲಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಮೇರು ವ್ಯಕ್ತಿತ್ವದ ಸರಳ ವ್ಯಕ್ತಿ.
ನಿರಂತರ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತ, 2016ರಲ್ಲಿ ಕಲಬುರಗಿ ವಿಶ್ವ ವಿದ್ಯಾಲಯದಲ್ಲಿ ಬಿ.ಎ. ಪತ್ರಿಕೋದ್ಯಮ ಪದವಿ ಪಡೆದು, ನಿಸ್ವಾರ್ಥ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಬಸೂದೆಗೆ ತಾಲೂಕು, ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಮುಡಿಗೇರಿದೆ.
