ಕೆಪಿಸಿಸಿ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ನೇಮಕ
ಬೆಂಗಳೂರು: ಕೆಪಿಸಿಸಿ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಡಾ.ಸಿದ್ಧಲಿಂಗರೆಡ್ಡಿ ಪಾಟೀಲ್ ಕಂದಕೂರ ಅವರು ನೇಮಕವಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರು, ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಎ.ಐ.ಸಿಸಿ ಕಾನೂನು, ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಮಾನ್ಯ ಅಧ್ಯಕ್ಷ ಡಾ. ಅಭಿಷೇಕ್ ಮನು ಸಿಂಘಿಯವರ ಆದೇಶದ ಮೇರೆಗೆ ಹಾಗೂ ಮಾನ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮೋದನೆಯೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ನೇಮಿಸಿ, ನೂತನ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಿ ಪಕ್ಷ ಸಂಘಟಣೆ ಮಾಡಲು ತಿಳಿಸಿದ್ದಾರೆ.
