ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆಯನ್ನು ನವೆಂಬರ್ 19 ರಿಂದ 21ರ ವರೆಗೆ ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಸ್ಟಾರ್ಟ್‌ಅಪ್‌ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್.ಟಿ.ಪಿ.ಐ) – ಬೆಂಗಳೂರು ಆಯೋಜಿಸಿರುವ ಬೆಂಗಳೂರು ಟೆಕ್ ಸಮ್ಮಿಟ್‌ನ 27 ನೇ ಆವೃತ್ತಿಯ ಉದ್ಘಾಟನಾ ಸಮಾರಂಭ ನ. 19ರಂದು ನೆರವೇರಲಿದೆ.
ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಘನ ಉಪಸ್ಥಿತಿ ವಹಿಸುವರು.
ಅತಿಥಿಗಳಾಗಿ ಕಿಯೋನಿಕ್ಸ್ ಅಧ್ಯಕ್ಷರಾದ ಶ್ರೀ ಶರತ್ ಕುಮಾರ್ ಬಚ್ಚೇಗೌಡ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ವಿಧಾನಸಭಾ ಸದಸ್ಯ ಶ್ರೀ ರಿಜ್ವಾನ್ ಅರ್ಷದ್, ಜರ್ಮನಿಯ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಿಯೆಗಳ ಫೆಡರಲ್ ಸಚಿವಾಲಯದ (BMWC) ಸಂಸದ ಸದಸ್ಯರು ಮತ್ತು ಸ್ಟಾರ್ಟ್ ಅಪ್ಸ್ ಮತ್ತು ಡಿಜಿಟಲ್ ಅರ್ಥವ್ಯವಸ್ಥೆಯ ಆಯುಕ್ತರ ಡಾ. ಅನ್ನಾ ಕ್ರೈಸ್ಟ್‌ಮನ್.
ಪ್ಯಾರಿಸ್ ಪ್ರದೇಶ, ಫ್ರಾನ್ಸ್ ನ ಪುನರುತ್ಥಾನ, ಆರ್ಥಿಕ ಅಭಿವೃದ್ಧಿ, ಆಕರ್ಷಣೆ ಮತ್ತು ಆವಿಷ್ಕಾರಗಳ ಉಸ್ತುವಾರಿ ಉಪಾಧ್ಯಕ್ಷೆ ಅಲೆಕ್ಸಾಂಡ್ರಾ ಡ್ಯುಬ್ಲಾಂಚ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷ ಶ್ರೀ ಬಿ.ವಿ. ನಾಯ್ಡು, ಜೈವಿಕ ತಂತ್ರಜ್ಞಾನ ದಾರ್ಶನಿಕ ಸಮೂಹ ಮತ್ತು ಬಯೋಕಾನ್ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಕಿರಣ್ ಮಜುಮ್ದಾರ್ ಷಾ, ಆಕ್ಸಿಲಾರ್ ವೆಂಚರ್ಸ್ ಅಧ್ಯಕ್ಷರು, ಮಾಹಿತಿ ತಂತ್ರಜ್ಞಾನ ದಾರ್ಶನಿಕ ಸಮೂಹ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕರಾದ ಶ್ರೀ ಕ್ರಿಸ್ ಗೋಪಾಲಕೃಷ್ಣನ್, ಸ್ಟಾರ್ಟ್ ಅಪ್ಸ್ ದಾರ್ಶನಿಕ ಸಮೂಹ ಅಧ್ಯಕ್ಷ ಅಕ್ಸೆಲ್ ಪಾರ್ಟ್‌ನರ್ಸ್, ಇಂಡಿಯ ಸಂಸ್ಥಾಪಕ ಪಾಲುದಾರರಾದ ಶ್ರೀ ಪ್ರಶಾಂತ್ ಪ್ರಕಾಶ್, ಟೆಕ್ಸಾಸ್ ಇನ್ಸ್ ಟ್ರುಮೆಂಟ್ಸ್ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸಂತೋಷ್ ಕುಮಾರ್, ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶ್ರೀಹರ್ಷ ಮಾಜೇಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನವದೆಹಲಿ ಎಸ್.ಟಿ.ಪಿ.ಐ, ಮಹಾನಿರ್ದೇಶಕರಾದ ಶ್ರೀ ಅರವಿಂದ್ ಕುಮಾರ್ ಭಾಗವಹಿಸಲಿದ್ದಾರೆ.