ನಿರುದ್ಯೋಗ ಸಮಸ್ಯೆ ಕುರಿತು ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಶರಣಗೌಡ ಕಂದಕೂರ
ಬೆಳಗಾವಿ: ಯಾದಗಿರಿ ಜಿಲ್ಲೆಯಲ್ಲಿ ಖಾಸಗಿ ಉದ್ಯಮಗಳನ್ನು ಸ್ಥಾಪಿಸಲು ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರವು ಯಾವುದೇ ಒಡಂಬಡಿಕೆ ಮಾಡಿಕೊಂಡಿ ರುವುದಿಲ್ಲ ಆದಾಗ್ಯೂ, ಸಹ ಕಳೆದ ಎರಡು ವರ್ಷಗಳಲ್ಲಿ 51 ಮಧ್ಯಮ ಹಾಗೂ 09 ಬೃಹತ್ ಕೈಗಾರಿಕಾ ಯೋಜನೆಗಳಿಗೆ ಅನುಮೋದನ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಗಮನ ಸೆಳೆದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, 60 ಕೈಗಾರಿಕೆಗಳಿಂದ ರೂ. 3,142.33 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 10,327 ಜನರಿಗೆ ಉದ್ಯೋಗ ಸೃಜನೆಯಾಗಲಿವೆ.
ಈ ಎಲ್ಲಾ ಕೈಗಾರಿಕೆಗಳು ಅನುಷ್ಠಾನದ ಹಂತದಲ್ಲಿದ್ದು ಇನ್ನು ಎರಡರಿಂದ ಮೂರು ವರ್ಷಗಳಲ್ಲಿ ಕಾರ್ಯಾರಂಭ ಮಾಡಲಿವೆ ಎಂದಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರೂ.5,41,369 ಕೋಟಿಗಳ ಬಂಡವಾಳ ಹೂಡಿಕೆಗೆ 57 ಕಂಪನಿಗಳೊಂದಿಗೆ ಒಡಂಡಿಕೆಗೆ ರಾಜ್ಯ ಸರ್ಕಾರವು ಸಹಿ ಮಾಡಲಾಗಿದೆ. ಇದರಿಂದಾಗಿ ಸುಮಾರು 2,81,411 ಉದ್ಯೋಗ ಸೃಷ್ಟಿಯಾಗಲಿದೆ.
ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಹಂಬಲಿ ಸುತ್ತಿರುವ ಎಷ್ಟು ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಿ ಕೊಡಲಾಗಿದೆ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಉದ್ಯೋಗ ಕಲ್ಪಿಸಿಕೊಡಲು ಯಾವ ಯಾವ ಕಂಪನಿಗಳೊಂದಿಗೆ ಒಡಂಡಿಕೆ ಮಾಡಿಕೊಳ್ಳಲಾಗಿದೆ ಮಾಹಿತಿ ನೀಡುವುದು.
ಇದುವರೆಗೂ ಯಾದಗಿರಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ ಯಂತಹ ಯಾವುದೇ ಯೋಜನೆಯನ್ನು ಅನುಷ್ಠಾನಗೊಳಿಸದೇ ಇರಲು ಕಾರಣಗಳೇನು ಮಾಹಿತಿ ನೀಡುವುದು ಹಾಗೂ ಕಲ್ಯಾಣ ಕರ್ನಾಟಕದ ವ್ಯಾಪ್ತಿಯ ರಾಯಚೂರು, ಕಲಬುರ್ಗಿ, ಕೊಪ್ಪಳ, ಬಳ್ಳಾರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಉದ್ಯೋಗಾಕಾಂಕ್ಷಿಗಳ ಅವಶ್ಯಕತೆಗೆ ಅನುಗುಣವಾಗಿ ಕೈಗಾರಿಕೆಗಳ ಸ್ಥಾಪನೆಯಂತಹ ಯೋಜನೆಯನ್ನು ಅನುಷ್ಠಾನಗೊಳಿಸಿರುವಂತೆ ಯಾದಗಿರಿ ಜಿಲ್ಲೆಯಲ್ಲಿಯೂ ಸಹ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಲು ಅನುಕೂಲ ಮಾಡಿಕೊಡುವ ವಿಷಯ ಪ್ರಸ್ತಾಪಿಸಿದ್ದಕ್ಕೆ ಸರ್ಕಾರ ಉತ್ತರ ನೀಡಿದೆ.