ಆದಿತ್ಯ ಠಾಕ್ರೆ ಗಡಿ ಕ್ಯಾತೆ | ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಬೆಳಗಾವಿ: ಗಡಿ ವಿಚಾರ ಕೆದಕಿದ ಆದಿತ್ಯ ಠಾಕ್ರೆ ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿವಿದಿದ್ದಾರೆ. ರಾಜ್ಯದ ತಂಟೆಗೆ ಬಂದರೆ ಸುಮ್ಮನೆ ಇರಲ್ಲ ಎನ್ನುವ ಸಂದೇಶ ನೀಡಿದ್ದಾರೆ.
ಮಾಧ್ಯಮದವರ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ ಎಂದಿದ್ದಾರೆ.
ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ವಿವಾದ ಕೆದುಕುವ ವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ.
ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು, ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದರು.