ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳು ಹಂತ ಹಂತವಾಗಿ ಬಗೆಹರಿಸಲಾಗುವುದು – ಇಕ್ಬಾಲ್‌ಸಿಂಗ್

ಬೀದರ: ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಸಲ್ಲಿಸಿದ ಮನವಿಗಳನ್ನು ಪರಿಶೀಲಿಸಿ ಎಲ್ಲಾ ಕುಂದು ಕೊರತೆಗಳ ನ್ನು ರಾಜ್ಯ ಮತ್ತು ಕೇಂದ್ರದ ವರಿಷ್ಠರ ಗಮನಕ್ಕೆ ತಂದು ಹಂತ ಹಂತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ನವದೆಹಲಿಯ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಇಕ್ಬಾಲ್‌ಸಿಂಗ್ ಲಾಲಪುರಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಸಮುದಾಯದ ಮುಖಂಡರೊಂದಿಗೆ ಸಭೆಯಲ್ಲಿ ಮಾತನಾಡಿದರು.

ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಜನಾಂಗದವರಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಸದುಪಯೋಗ ಮಾಡಿಕೊಳ್ಳುವಂತೆ ಅಧ್ಯಕ್ಷರು ತಿಳಿಸಿದರು.

ಭಾರತವು ಪ್ರಪಂಚದಲ್ಲಿಯೇ ಸಹಿಷ್ಣುತೆ ಹೊಂದಿರುವ ಏಕೈಕ ದೇಶವಾಗಿದ್ದು, ನಾವೆಲ್ಲರೂ ಒಂದಾಗಿ ಸುರಕ್ಷಿತರಾಗಿ ದೇಶದ ಏಳ್ಗೆಗಾಗಿ ವಿಚಾರ ಮಾಡಿದರೆ ದೇಶದ ಅಭಿವೃದ್ಧಿ ಆಗುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.

ಅಲ್ಪಸಂಖ್ಯಾತರನ್ನು ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳು ಸಿಗುತ್ತಿದ್ದು ಉನ್ನತ ಸ್ಥಾನದಲ್ಲಿ ರುವವರು ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಯೋಜನೆಗಳಲ್ಲಿ ಪಾರದರ್ಶಕತೆ ಯನ್ನು ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಹಂತದ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಆಯಾ ಅಧಿಕಾರಿಗಳಿಗೆ ಭೇಟಿ ಮಾಡಿಕೊಂಡು ಬಗೆಹರಿಸಿಕೊಳ್ಳಲು ಸೂಚಿಸಿದರು. ಬೀದರ ಜಿಲ್ಲೆ ಎಲ್ಲಾ ಧರ್ಮದವರಿಂದ ಕೂಡಿದ್ದು ಇದು ಏಕತೆ ನಾಡಾಗಿದೆ. ಇಲ್ಲಿರುವ ಏಕತಾಭಾವ ಎಲ್ಲಾ ಗಡಿಭಾಗದ ರಾಜ್ಯಗಳಲ್ಲಿ ಪಸರಿಸಲಿ ಎಂದು ಹಾರೈಸಿದರು.

ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರುಗಳು ವಿವಿಧ ರೀತಿಯಲ್ಲಿ ಸಮುದಾಯವರು ಅನುಭವಿಸುತ್ತಿರುವ ಸಮಸ್ಯೆ ಗಳು ಮತ್ತು ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲುಗಳನ್ನು ನೀಡಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಲು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!