ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕು | ಭಾರತ ಜೋಡೋ ಯುವ ಸಂಘ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ವೇದಿಕೆ | ಬೀದರ್ ನಲ್ಲಿ ಸಿಎಂ ಮಾತು

ಬೀದರ: ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.
ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕು. ನಿಮ್ಮ ಮಾರ್ಗದರ್ಶನದಂತೆ ಪ್ರತಿಯೊಂದು ಕುಟುಂಬ ಬೆಳಗುತ್ತಿದೆ. ನಾರಿ ಶಕ್ತಿ ದೇಶದ ಶಕ್ತಿ. ನಾನು ಇಂದು ಬಸವಕಲ್ಯಾಣದಲ್ಲಿರುವ ಬಸವಣ್ಣನವರ ಅನುಭವ ಮಂಟಪದಿಂದ ಬರ ಪರಿಸ್ಥಿತಿ ಅಧ್ಯಯನ ಪ್ರವಾಸ ಆರಂಭಿಸಲು ಬಂದಿದ್ದೇನೆ. ಇಲ್ಲಿಂದ ಕಲಬುರ್ಗಿಗೆ ಹೋಗಿ, ಕಲ್ಯಾಣ ಕರ್ನಾಟಕದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡುತ್ತೇನೆ. ನಾವು ಯಾವುದೇ ಗ್ರಾಮಕ್ಕೆ ಹೋದರೂ ಅಲ್ಲಿ ಗ್ರಾಮದೇವತೆ ಬಗ್ಗೆ ಕೇಳುತ್ತೇವೆ. ನಮ್ಮ ಭೂಮಿಯನ್ನು ಮಾತೃಭೂಮಿ, ಭೂಮಿತಾಯಿ ಎಂದು ಪರಿಗಣಿಸುತ್ತೇವೆ” ಎಂದು ಬಣ್ಣಿಸಿದರು.
ಭಾರತ ಜೋಡೋ ಯುವ ಸಂಘ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ವೇದಿಕೆ: “ಮಹಿಳೆಯರ ಸುರಕ್ಷತೆಗಾಗಿ ಅಕ್ಕಪಡೆ ಆರಂಭಿಸಲಾಗಿದೆ. ನಮ್ಮ ಸರ್ಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮುಖಂಡತ್ವದಲ್ಲಿ ಈ ಪಡೆಯನ್ನು ರಚಿಸಿದೆ. ಈ ಪಡೆಗೆ ಸೇರಿರುವವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಶಕ್ತಿ, ಧೈರ್ಯ, ಸಾಧನೆಗೆ ಫಲ ಸಿಗುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಐತಿಹಾಸಿಕ ತೀರ್ಮಾನ ಮಾಡಲಿದೆ.
ಮಹಿಳೆಯರಿಗಾಗಿ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿ ಕಾರ್ಯಕ್ರಮವನ್ನು ಈಗಾಗಲೇ ನೀಡಿದ್ದೇವೆ. ಮಹಿಳೆಯರು ಹಾಗೂ ಯುವಕರಿಗೆ ಪ್ರತಿ ಪಂಚಾಯ್ತಿಯಲ್ಲಿ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ಹಾಗೂ ಜಾತ್ಯಾತೀತ ತತ್ವ ಉಳಿಸಿಕೊಂಡು ಒಗ್ಗಟ್ಟಿನಿಂದ ಇರಲು ರಾಜ್ಯದಲ್ಲಿ 10 ಸಾವಿರ ಭಾರತ ಜೋಡೋ ಯವ ಸಂಘ ರಚಿಸಲು ಸರ್ಕಾರ ಆದೇಶ ಮಾಡಿದೆ” ಎಂದು ತಿಳಿಸಿದರು.
“ನಾವು ಮಾತೃ ದೇವೋಭವ ಎಂದು ಪರಿಗಣಿಸಿದ್ದೇವೆ. ನೀವೆಲ್ಲರೂ ನಮ್ಮ ಜೊತೆ ಕೈಜೋಡಿಸಿ, ನಮಗೆ ಶಕ್ತಿ ತುಂಬಿದ್ದೀರಿ. ನಿಮಗೆ ಶಕ್ತಿ ನೀಡುವ ಜವಾಬ್ದಾರಿ ನಮ್ಮದು. ನಿಮ್ಮಲ್ಲಿ ನಾಯಕತ್ವ ಬೆಳೆಯಬೇಕು. ಪಂಚಾಯ್ತಿಯಿಂದ ಸಂಸತ್ತಿನವರೆಗೂ ನಾಯಕತ್ವ ಬೆಳೆಯಬೇಕು. ರಾಜಕೀಯವಾಗಿ ಮಾತ್ರವಲ್ಲ, ನಿಮ್ಮ ನಿಮ್ಮ ಕ್ಷೇತ್ರದಲ್ಲಿ ನಾಯಕರಾಗಿ ಬೆಳೆಯಬೇಕು. ನಿಮ್ಮ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಈ ಸರ್ಕಾರ ಇರಲಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಈಶ್ವರ ಖಂಡ್ರೆ, ಡಾ. ಶರಣ ಪ್ರಕಾಶ ಪಾಟೀಲ್, ಸಂಸದ ಸಾಗರ್ ಖಂಡ್ರೆ, ಮಾಜಿ ಸಚಿವ ರಹೀಮ್ ಖಾನ್, ಎಂಎಲ್ಸಿಗಳಾದ ಬಸನಗೌಡ ಬಾದರ್ಲಿ, ಮಾಜಿ ಎಂಎಲ್ಸಿ ವಿಜಯ್ ಸಿಂಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತಿಮೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್
ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಕೆ : ಬಸವಕಲ್ಯಾಣ ದಲ್ಲಿ ಇಂದು ಛತ್ರಪತಿ ಶಿವಾಜಿ ಮಹಾರಾಜ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಜಗದ್ಗುರು ಬಸವೇಶ್ವರ ಹಾಗೂ ಮಹಾತ್ಮ ಬೊಮ್ಮಗೊಂಡೇಶ್ವರರ ಪ್ರತಿಮೆಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!