ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕರೆದ ಮುಖ್ಯಮಂತ್ರಿಯವರ ಬೀದರ್ ಭೇಟಿಯ ಪೂರ್ವಭಾವಿ ಸಭೆ | ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯ ಸಭೆಯಲ್ಲಿ ಅಧಿಕಾರಿಗಳು ಭಾಗಿ

ಬೀದರ : ಏಪ್ರಿಲ್ 11 ಹಾಗೂ 12 ರಂದು ನಗರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.

ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕರೆದ ಮುಖ್ಯಮಂತ್ರಿಯವರ ಬೀದರ್ ಭೇಟಿಯ ಪೂರ್ವಭಾವಿ ತಯಾರಿ, CMIDP ಯೋಜನೆಯ ₹50.00 ಕೋಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಬೇಸಿಗೆ ಅವಧಿಯಲ್ಲಿ ಜಿಲ್ಲೆಯಲ್ಲಿ ಜನ-ಜಾನುವಾರು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದರು.

ಸಿಎಂ ಭೇಟಿ ಸಂದರ್ಭದಲ್ಲಿ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ವಿವಿಧ ಸರ್ಕಾರಿ ಸೌಲಭ್ಯ ವಿತರಣೆ ಕಾರ್ಯಕ್ರಮ ಆಯೋಜನೆ ಮಾಡುವ ಚಿಂತನೆ ಇದೇ, ಅಂದುಕೊಂಡತೆ ಕಾರ್ಯಕ್ರಮ ಆಯೋಜನೆ ಮಾಡಿದಲ್ಲಿ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕೆಂದರು.

ಜಿಲ್ಲೆಯಲ್ಲಿ ಕೆಲವು ಕಡೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ದೂರುಗಳು ಬರುತ್ತಿವೆ. ದೂರು ಬಂದ 24 ಗಂಟೆಯಲ್ಲಿ ನೀರು ಒದಗಿಸಬೇಕು. ದೂರುಗಳ ನಿರ್ವಹಣೆಗಾಗಿ ಟಾಸ್ಕ್ ಫೆÇೀರ್ಸ್’ ರಚಿಸಬೇಕು. ಜಿಲ್ಲೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರುತ್ತಿರುವ ಕುರಿತು ಸಹ ದೂರುಗಳು ಬರುತ್ತಿವೆ ಅಂತಹವರ ವಿರುದ್ಧ ಕಠಿಣ ಕ್ರಮ ಜರಿಗಿಸಬೇಕೆಂದರು.

ಹುಲಸೂರಿನ ಬಲವಂತರಾಯ್ ಎನ್ನುವವರ ಪಟ್ಟಾ ಜಮೀನು ಸರ್ಕಾರಿ ಜಮೀನು ಎಂದಾಗಿದೆ ಎಂದು ಅವರು ದೂರು ನೀಡಿದ್ದಾರೆ ಕೂಡಲೇ ಅದನ್ನು ಸರಿಪಡಿಸಬೇಕು. ಕಬ್ಬಿನ ಬಿಲ್ಲು ಬಾಕಿ ಉಳಿಸಿಕೊಂಡಿರುವ ಕಂಪನಿಗಳಿಗೆ ನೋಟೀಸ್ ನೀಡಿ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತರಾದ ಮುಕುಲ್ ಜೈನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಮತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!