ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ: ಬೇಸಿಗೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಕುರಿತು ಪತ್ರಿಕೆಯಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಔರಾದ ತಾಲೂಕಿನ ಸೊರಹಳ್ಳಿ, ಜಂಬಗಿ, ಮಹಾರಾಜವಾಡಿ, ವಿಜಯನಗರ್ ತಾಂಡಾ, ಏಕಲಾರ ತಾಂಡಾ, ಕಿರುಗುನವಾಡಿ, ಸೇರಿದಂತೆ ವಿವಿದೆಡೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿಗಳು ಗ್ರಾಮಸ್ಥರೊಂದಿಗೆ ಚರ್ಚಿಸಿ ನಂತರ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದAತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.ಈ ಸಂದರ್ಭದಲ್ಲಿ ಔರಾದ ತಹಸೀಲ್ದಾರ ಮಹೇಶ ಪಾಟೀಲ, ಗ್ರಾಮೀಣ ಕುಡಿಯುವ ನೀರು ಸಹಾಯಕ ಇಂಜಿನೀಯರ ಸೇರಿದಂತೆ ಇತರೇ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!