ಹೆಚ್ಚೆಚ್ಚು ವ್ಯಾಜ್ಯ ಪೂರ್ವ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ

ಬೀದರ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಬೃಹತ್ ಲೋಕ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಬನಸೋಡೆ ಹೇಳಿದರು.

ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು, ವಿಭಾಗ, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣಗಳು, ಕಂದಾಯ ಅಪರಾಧ ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದರು.

ಈ ಬಾರಿಯ ಲೋಕ ಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ (ಪೇಂಡಿಂಗ್) ಇರುವ ಪ್ರಕರಣಗಳನ್ನು ಹೆಚ್ಚು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಕಳೆದ ಲೋಕ ಅದಾಲತಗಿಂತ ಈ ಸಾರಿಯ ಲೋಕ ಅದಾಲತನಲ್ಲಿ ಹೆಚ್ಚು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುವುದೆಂದರು.

ನವೆಂಬರ್.14, 2024 ರ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 29,789 ಪ್ರಕರಣಗಳು ಪೆಂಡಿಂಗ್ ಇದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ. ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ, ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧ್ಯವ ಹೊಂದುವ ಅವಕಾಶ ಇರುತ್ತದೆ. ಜಿಲ್ಲೆಯ ಹೆಚ್ಚಿನ ಜನರು ಈ ಲೋಕ ಅದಾಲತನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಆಕಾಸ ಸಜ್ಜನ, ಜೀವನ, ನಾಗರಾಜ, ಪ್ರೀತಿ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!