ಯಾದಗಿರಿ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ನಕಲು ಮುಕ್ತ,ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು,ಸಕಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಕ್ಟೋಬರ್ 26ರಂದು ಯಾದಗಿರಿ ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2:30ರಿಂದ 4:30 ರವರೆಗೆ ಈ ಪರೀಕ್ಷೆ ನಡೆಯಲಿದ್ದು,1491 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಅ. 27 ರಂದು ಜಿಲ್ಲೆಯ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ 8836 ವಿಧ್ಯಾರ್ಥಿ ಗಳು(ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12: 30 ರವರೆಗೆ ಹಾಗೂ ಮಧ್ಯಾಹ್ನ 2:30ರಿಂದ 4:30ರವರೆಗೆ ಈ ಪರೀಕ್ಷೆ ಬರೆಯಲಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 300.ಮೀ. ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಿ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ.ಪರೀಕ್ಷೆ ಸಂದರ್ಭದಲ್ಲಿ ಈ ಕೆಳಗಿನಂತೆ ವಸ್ತ್ರ ಸಂಹಿತೆ ಹಾಗೂ ವಿಶೇಷ ಸೂಚನೆ ಪಾಲಿಸಲು ಅವರು ಸೂಚಿಸಿದ್ದಾರೆ.
ಪುರುಷ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟಗಳನ್ನು ಅನುಮತಿಸದೇ ಇರುವುದರಿಂದ ಅರ್ದ ತೋಳಿನ ಶರ್ಟಗಳನ್ನು ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ ಧರಿಸಲು ಆಧ್ಯತೆ ನೀಡಬೇಕು .ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೇಟ್ ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.ಪರೀಕ್ಷೆ ಹಾಲ್ ನಲ್ಲಿ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗವಿರುವ ಚಪ್ಪಲಿ ಗಳನ್ನು ಧರಿಸುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು,ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು ,ಬ್ರೂಚ್ಗಳು ಅಥವಾ ಬಟನ್ ಗಳು ಹೊಂದಿರುವ ಬಟ್ಟೆ ಗಳನ್ನು ಧರಿಸುವದನ್ನು ನಿಷೇಧಸಲಾಗಿದೆ. ಪರೀಕ್ಷೆ ದಿನದಂದು ಪೂರ್ಣ ತೋಳಿನ ಬಟ್ಟೆ ಗಳನ್ನು/ಜೀನ್ಸ್ ಪ್ಯಾಂಟ್ ಧರಿಸಬಾರದು.ಅದರ ಬದಲಾಗಿ ಅರ್ದ ತೋಳಿನ ಬಟ್ಟೆ ಗಳನ್ನು ಅವರಿಗೆ ಮುಜುಗರವಾಗದಂತೆ ಉಲ್ಲೇಖಿಸಿರುವ ನಿಯಮಗಳಂತೆ ಧರಿಸಲು ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿ ಗಳನ್ನು ಮತ್ತು ದಪ್ಪವಾದ ಅಡಿಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿ ಗಳನ್ನಾಗಲಿ ಧರಿಸಬಾರದು.ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಗಳು ಧರಿಸುವುದು ಕಡ್ಡಾಯವಾಗಿದೆ. ಅದರಂತೆ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಅಕ್ರಮ ತಡೆಯಲು ಪ್ರತಿ ಕೇಂದ್ರಕ್ಕೆ ವಿಶೇಷ ಜಾಗೃತ ದಳ ಮತ್ತು ವಿಕ್ಷಕರನ್ನು ನೇಮಿಸಿದೆ. ಪರೀಕ್ಷೆ ನಡೆಯುವ ದಿನಗಳಂದು ಝರಾಕ್ಸ ಅಂಗಡಿ,ಪುಸ್ತಕ ಮಳಿಗೆ ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷೆ ಕೇಂದ್ರಗಳಲ್ಲಿ ಯಾವುದೇ ತರಹದ ಇಲೆಕ್ಟ್ರಾನಿಕ್ ವಸ್ತುಗಳು ,ಮೊಬೈಲ್ , ಪೆನ್ ಡ್ರೈವ್ಗಳು,ಇಯರ್ ಫೋನ್, ಮೈಕ್ರೋಫೋನ್ಗಳು,ಬ್ಲೂಟೂಥ್ ಸಾಧನಗಳು,ಮತ್ತು ಕೈಗಡಿಯಾರ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ಒಯ್ಯಲು ಅನುಮತಿ ಇರುವದಿಲ್ಲವೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.