ಗುರುಮಠಕಲ್ ತಹಸೀಲ್ದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ | ಅದ್ಧೂರಿಯ ಸ್ವಾತಂತ್ರೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲು ಸಲಹೆ

ಗುರುಮಠಕಲ್ : ತಾಲೂಕಿನಲ್ಲಿ ಸ್ವಾತಂತ್ರ್ಯ ದಿನವನ್ನು ಆ.15 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಚರಿಸಲು ತಹಸೀಲ್ದಾರ ಶಾಂತಗೌಡ ಬಿರಾದಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ ಸ್ವಾತಂತ್ರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ಸ್ವಾತಂತ್ರ‍್ಯ ದಿನವನ್ನು ಆಚರಿಸಲು ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗಬೇಕು. ಹೆಚ್ಚು ಆಕರ್ಷಕವಾಗಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಾರ್ವಜನಿಕರು ಸ್ವಾತಂತ್ರ‍್ಯ ದಿನೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಬೇಕೆಂದು ಮನವಿ ಮಾಡಿದರು.

ನಂತರ ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಕಾರ್ಯಕ್ರಮ ಮುಗಿದ ನಂತರ ಸಿಹಿ ವಿತರಿಸುವ ಕೆಲವನ್ನು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ಸ್ವಾತಂತ್ರ‍್ಯ ದಿನಾಚರಣೆಯ ದಿನದಂದು ಕಾರ್ಯಕ್ರಮಗಳು ಶಿಷ್ಠಾಚಾರದಂತೆ ನಡೆಸುವ ನಿಟ್ಟಿನಿಂದ ಅಧಿಕಾರಿಗಳನ್ನೊಳಗೊಂಡ ನಾನಾ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪೂರ್ವಭಾವಿ ತರಬೇತಿಯನ್ನು ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ತಹಸೀಲ್ದಾರರು ಸೂಚಿಸಿದರು. ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ನಿರ್ಮಾಣ ಮಾಡಿ ಪ್ರದರ್ಶಿಸಲು ಅಗತ್ಯ ಕ್ರಮವಸುವಂತೆ ತಾಲೂಕಾಧಿಕಾರಿಗಳು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ದ್ವಜಾರೋಹಣದಲ್ಲಿ ಗುರುಮಠಕಲ್ ಶಾಸಕರಾದ ಶರಣಗೌಡ ಕಂದಕೂರ ಭಾಗವಹಿಸಲಿದ್ದಾರೆ. ಖಾಸಮಠ ಪೂಜ್ಯಾ ಶ್ರೀ ಶಾಂತವೀರ ಗುರುಮುರಘರಾಜೇಂದ್ರ ಸ್ವಾಮಿಜಿ ಸಾನಿದ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಗ್ರೇಡ್2 ತಹಸಿಲ್ದಾರ ನರಸಿಂಹ ಸ್ವಾಮಿ, ತಾ.ಪಂ. ಇಒ ಅಂಬ್ರೇಷ ಪಾಟೀಲ್,ಮುಖ್ಯಾಧಿಕಾರಿ ಭಾರತಿ ದಂಡೋತಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸಿಆರ್ ಪಿ ಬಾಲಪ್ಪ, ಪಿಎಸ್ ಐ ದಿನೇಶ, ಕೃಷ್ಣಾ ರೆಡಿ, ಬಂಗಾರಪ್ಪ, ನಾರಾಯಣರೆಡ್ಡಿ, ರಾಮುಲು, ರಂಗಸ್ವಾಮಿ, ಲಾಲಪ್ಪ ತಲಾರಿ, ವೇಣುಗೋಪಾಲ ಮೇದಾ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ವಿವಿಧ ಶಾಲೆಯ ಮುಖ್ಯ ಗುರುಗಳು ಮತ್ತು ಊರಿನ ಗಣ್ಯರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!