ಗುರುಮಠಕಲ್ : ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳನ್ನು ಕೂಡಲೆ ರಾಜ್ಯ ಸರ್ಕಾರ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ( ಸಾಗರ ಬಣ ) ತಾಲೂಕು ಸಂಚಾಲಕ ರಂಗಸ್ವಾಮಿ ಕೊಂಕಲ್ ಆಗ್ರಹಿಸಿದರು.
ನಗರದ ತಹಸೀಲ್ದಾರ್ ಕಾರ್ಯಾಲಯದ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ಹಮ್ಮಿಕೊಂಡಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಐದನೇ ದಿನದ ಮುಷ್ಕರಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ( ಸಾಗರ ಬಣ ) ತಾಲೂಕು ಘಟಕ ವತಿಯಿಂದ ಬೆಂಬಲ ನೀಡಿ ಅವರು ಮಾತನಾಡಿದರು.
ರೈತರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೂ ಅವಿನಾಭಾವ ಸಂಬಂಧವಿದೆ ರೈತರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹಗಲಿರಲು ಎನ್ನದೆ ಶ್ರಮಿಸುತ್ತಿದ್ದಾರೆ ಆದರೆ ಸರಕಾರಗಳು ಅವರಿಗೆ ಬೇಕಾದ ಕಾರ್ಯಾಲಯ ಗಣಕಯಂತ್ರ ಹಾಗೂ ಇನ್ನಿತರ ಮೂಲ ಸೌಲಭ್ಯಗಳನ್ನು ನೀಡದೆ ಇರುವುದು ಸರಿಯಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ಕುಳಿತಿರುವುದರಿಂದ ರೈತರು ಸಾರ್ವಜನಿಕರು ವಿದ್ಯಾರ್ಥಿಗಳಿಗೂ ತುಂಬಾ ತೊಂದರೆಯಾಗುತ್ತಿದೆ.
ಕೂಡಲೇ ಸರಕಾರ ಸಂಬಂಧಿಸಿದ ಸಚಿವರು ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಂಡು ಅವರ ಪ್ರಮುಖ ಬೇಡಿಕೆಗಳ ನ್ನು ಈಡೇರಿಸಬೇಕು ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ನಮ್ಮ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಬೆಂಬಲಿಸಿ ಉಗ್ರವಾದ ಹೋರಾಟ ಮಾಡುವುದಾಗಿ ಸರಕಾರಕ್ಕೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘಟನ ನಾಗರಾಜ್ ಕಂದೂಕುರ್ ಅನಿಲ್ ಕಂದೂಕುರ್ ಆನಂದ್ ಯಲಸತ್ತಿ ರಾಜು ದುಪ್ಪಳ್, ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
