ಬಹು ದಿನಗಳ ಬೇಡಿಕೆ ಈಡೇರಿಕೆ | ಬಡ ಜನರು, ರೈತರಿಗೆ ಅನುಕೂಲ
ಗುರುಮಠಕಲ್: ರಾಜ್ಯ ಸರ್ಕಾರದ ಬಡವರಿಗೆ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುವ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗುರುಮಠಕಲ್ ನಲ್ಲಿ ಕೊನೆಗೂ ಉದ್ಘಾಟನೆಗೆ ಸಿದ್ಧಗೊಂಡಿದೆ.
ಗಡಿ ಭಾಗದ ಜನರ ಬೇಡಿಕೆಯ ಇಂದಿರಾ ಕ್ಯಾಂಟೀನ್ ಜುಲೈ 31 ರಿಂದ ಬಡ ಜನರಿಗೆ ಅನ್ನ ನೀಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತಿಯಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಂಸದ ರಾಧಾಕೃಷ್ಣ ದೊಡ್ಮನಿ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಡಾ. ಚಂದ್ರಶೇಖರ ಪಾಟೀಲ್, ಶಶೀಲ್ ಜಿ. ನಮೋಶಿ, ಪುರಸಭೆ ಅಧ್ಯಕ್ಷೆ ಜಯಶ್ರೀ ಪಾಟೀಲ್, ಉಪಾಧ್ಯಕ್ಷೆ ರೇಣುಕಾ ಪಡಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಸಹಾಯ ಆಯುಕ್ತ ಹಂಪಣ್ಣ ಸಜ್ಜನ್, ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ, ತಹಸೀಲ್ದಾರ್ ಶಾಂತಗೌಡ ಬಿರಾದಾರ ಸೇರಿದಂತೆ ಪುರಸಭೆ ಮುಖ್ಯಾಧಿಕಾರಿ ಭಾರತಿ ಸಿ. ದಂಡೋತಿ, ಕಿರಿಯ ಅಭಿಯಂತರ ಅಬ್ದುಲ್ ಅಲಿಮ್, ಕಾರ್ಯಪಾಲಕ ಅಭಿಯಂತರ ಕೆ.ವಿಶ್ವನಾಥ, ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ.
