ಯಾದಗಿರಿ: ಗುರುಮಠಕಲ್ 110ಕೆವಿ ಸಬ್ ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2025ರ ಜೂನ್ 21ರ ಶನಿವಾರ ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಯಾದಗಿರಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು (ವಿ)  ತಿಳಿಸಿದ್ದಾರೆ.

110ಕೆವಿ ವಿದ್ಯುತ್ ಉಪ ಕೇಂದ್ರ ಗುರುಮಠಕಲ್, 33ಕೆವಿ ವಿದ್ಯುತ್ ಉಪ ಕೇಂದ್ರ ಗಾಜರಕೋಟ, 33ಕೆವಿ ವಿದ್ಯುತ್ ಉಪ ಕೇಂದ್ರ ತೊಲಮಾಮಿಡಿಗೆ ವಿದ್ಯುತ್ ಸರಬರಾಜು ನಿಲುಗಡೆ ಮಾಡಲಾಗುವುದು. ಈ 110/33ಕೆವಿ ವಿದ್ಯುತ್ ಉಪ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಮಾಡುವ ಎಲ್ಲಾ 11ಕೆವಿ ಮಾರ್ಗಗಳಿಂದ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಗುರುಮಠಕಲ್ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ, ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಜೆಸ್ಕಾಂಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!