ಯಾದಗಿರಿ : ಗುರುಮಠಕಲ್ 110 ಕೆವಿ ಸಬ್‌ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2025ರ ಮಾರ್ಚ್ 8 ರ ಶನಿವಾರ ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ಸರಬರಾಜುನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಯಾದಗಿರಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
110 ಕೆವಿ ವಿದ್ಯುತ್ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಮಾಡುವ ಎಲ್ಲಾ 11ಕೆವಿ ಮಾರ್ಗಗಳಿಂದ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಗುರುಮಠಕಲ್ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ, ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಜೆಸ್ಕಾಂಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
