ಯಾದಗಿರಿ : ರಾಜ್ಯ ಗೃಹ ಸಚಿವರಾದ ಶ್ರೀ ಡಾ.ಜಿ.ಪರಮೇಶ್ವರ ಅವರು ಜನವರಿ 27ರ ಸೋಮವಾರ ರಂದು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.

ಜನವರಿ 27 ರ ಸೋಮವಾರ ರಂದು ಬೆಳಿಗ್ಗೆ 9.30 ಗಂಟೆಗೆ ಹೈದರಾಬಾದ್ ದಿಂದ ನಿರ್ಗಮಿಸಿ ಮಧ್ಯಾಹ್ನ 12 ಗಂಟೆಗೆ ಯಾದಗಿರಿಗೆ ಆಗಮಿಸಿ, ಮಧ್ಯಾಹ್ನ 12.30 ಗಂಟೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡ ಮತ್ತು ವಸತಿ ಗೃಹಗಳ ಉದ್ಘಾಟಣೆ ನಡೆಸುವರು.

ನಂತರ ಅಂದು ಮಧ್ಯಾಹ್ನ 2-30 ಗಂಟೆಗೆ ಯಾದಗಿರಿ ಪೊಲೀ ಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿ ಸಿದಂತೆ ಪ್ರಗತಿ ಪರಿಶೀಲನೆ ನಡೆಸಿ, ನಂತರ ಸಂಜೆ 4.30 ಗಂಟೆಗೆ ಕಲಬುರಗಿಗೆ ಪ್ರಯಾಣ ಬೆಳೆಸುವರು.

Spread the love

Leave a Reply

Your email address will not be published. Required fields are marked *

error: Content is protected !!