ಶರಣಬಸವೇಶ್ವರ ಸಂಸ್ಥಾನದ 8 ನೇ ಪೀಠಾಧಿಪತಿಯಾಗಿದ್ದ ಡಾ. ಅಪ್ಪ | ವಿದ್ಯಾಭಂಡಾರಿ ಎಂಬ ಖ್ಯಾತಿ | ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ


ಶರಣ ಪರಂಪರೆಯ ಜ್ವಲಂತ ದೀಪದಂತಿದ್ದ ಪೂಜ್ಯ ಡಾ.ಶರಣಬಸ್ಸಪ್ಪ ಅಪ್ಪ ಅವರು ಸಮಸಮಾಜ ನಿರ್ಮಾಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆಯು ಕನ್ನಡ ನಾಡಿಗೆ ಮತ್ತು ಶರಣ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಕಲಬುರಗಿ: ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಮಹಾದಾಸೋಹ ಪೀಠಾಧಿಪತಿಗಳಾದ ಪರಮಪೂಜ್ಯ ಡಾ.ಶರಣಬಸ್ಸಪ್ಪ ಅಪ್ಪ (90) ಅವರು ಗುರುವಾರ ರಾತ್ರಿ ಲಿಂಗೈಕ್ಯರಾದರು.ಈ ಹಿಂದೆ ವಯೋ ಸಹಜ ಉಸಿರಾಟ ತೊಂದರೆಯಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು, ಕೆಲ ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದಿದ್ದರು.

ದಾಸೋಹ ಮನೆಯಲ್ಲಿ ವೈದ್ಯಕೀಯ ಆರೈಕೆಯಲ್ಲಿದ್ದರು ಎನ್ನಲಾಗಿದೆ. ಗುರುವಾರ (ಆ.14)ರ ರಾತ್ರಿ ಅಪಾರ ಸಂಖ್ಯೆಯ ಭಕ್ತಗಣವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ತಿಳಿದು ಬಂದಿದೆ.

Spread the love

Leave a Reply

Your email address will not be published. Required fields are marked *

error: Content is protected !!