ಯಾದಗಿರಿ: 2024-25ನೇ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ವತಿಯಿಂದ ಅನುಷ್ಠಾನಗೊಳ್ಳಲಿರುವ ಗಿರಿಜನ ಉಪಯೋಜನೆ (ಟಿಎಸ್‌ಪಿ) ಕಾರ್ಯಕ್ರಮದಡಿ (10+1) ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಬೆಂಗಳೂರುನಲ್ಲಿ ನೊಂದಾಯಿಸಿಕೊಂಡಿರುವ, ಯಾದಗಿರಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ಒಳಗಿರಬೇಕು, ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಮಾತ್ರ 18 ರಿಂದ 60 ವರ್ಷ ಒಳಗಿನ ಪುರುಷ ಸದಸ್ಯರುಗಳಿಗೆ ಅವಕಾಶ ಕಲ್ಪಿಸಲಾಗುವುದು.
2024-25ನೇ ಸಾಲಿನ, ಗಿರಿಜನ ಉಪಯೋಜನೆಯಡಿ (10+1) ಕುರಿ, ಮೇಕೆ ಘಟಕಗಳ ಅನುಷ್ಠಾನಕ್ಕೆ ಸಹಾಯ ಧನವನ್ನು ಪಡೆಯಲು, ಜಿಲ್ಲಾ ಆಯ್ಕೆ ಸಮಿತಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ನಮೂನೆಗಳನ್ನು ಅರ್ಜಿದಾರರು ತಮ್ಮ ವ್ಯಾಪ್ತಿಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಕಾರ್ಯಾಲಯದಿಂದ ಅಥವಾ ಸಹಾಯಕ ನಿರ್ದೇಶಕರ ಕಛೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಪಶು ಆಸ್ಪತ್ರೆ ಆವರಣ ಯಾದಗಿರಿದಿಂದ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2024ರ ಡಿಸೆಂಬರ್ 5 ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಪಶು ಆಸ್ಪತ್ರೆ ಆವರಣ, ಸ್ಟೇಶನ್ ರೋಡ್ ಯಾದಗಿರಿ ದೂ.ಸಂ.08473 200149ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.