ಕೆಯುಡಬ್ಲ್ಯೂಜೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ | 4 ಜನ ಪತ್ರಕರ್ತರಿಗೆ ಪ್ರಶಸ್ತಿ ಗಿರಿನಾಡಿಗೆ ಹೆಮ್ಮೆಯ ಸಂಗತಿ |  ಸಂಕೀನ್ ಸಂತಸ

ಯಾದಗಿರಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(kuwj)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪ್ರಶಸ್ತಿ ನೀಡಿ‌ ಗೌರವಿಸಲಿದ್ದಾರೆ ಎಂದರು.

ಪತ್ರಕರ್ತ ಮಲ್ಲಯ್ಯ ಪೋಲಂಪಲ್ಲಿ ಅವರಿಗೆ ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ) ಪ್ರಶಸ್ತಿ, ಪತ್ರಕರ್ತ ಅಮರೇಶ ಹಿರೇಮಠ ಅವರಿಗೆ ಅಭಿಮಾನಿ ಪ್ರಕಾಶನ ಪ್ರಶಸ್ತಿ, ಪತ್ರಕರ್ತ ಬಸವರಾಜ ಕಟ್ಟಿಮನಿ ಅವರಿಗೆ ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ) ಪ್ರಶಸ್ತಿ ಹಾಗೂ ಪತ್ರಕರ್ತ ಸಂಜೀವರಾವ್ ಕುಲಕರ್ಣಿ ಅವರಿಗೆ ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ ಲಭಿಸಿದೆ ಎಂದು ಹೇಳಿದರು.

ಜಿಲ್ಲೆಯ 4 ಜನ ಪತ್ರಕರ್ತರ ‌ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿ ‌ಘೋಷಣೆ ಮಾಡಿದ ಸಂಘದ ರಾಜ್ಯಾಧ್ಯಕ್ಷ‌ ಶಿವಾನಂದ ತಗಡೂರು ಅವರು ಜಿಲ್ಲೆಯ ಘನತೆ ಇಮ್ಮಡಿಗೊಳಿಸಿದ್ದಾರೆ ಎಂದರು. ನಿಜಕ್ಕೂ ಸಣ್ಣ ಜಿಲ್ಲೆಯ ನಾಲ್ಕು ಜನ ಪತ್ರಕರ್ತರ ಸೇವೆಗೆ ಗೌರವ ಸಿಕ್ಕಂತಾಗಿದೆ. ಗಿರಿನಾಡಿನ ಕಿರುತಿ ನಾಡಿನ‌ ತುಂಬ ಪಸರಿಸಿದೆ ಎಂದು ತಿಳಿಸಿದರು. ಅದರಲ್ಲಿಯೂ ಶಹಾಪುರದ ಇಬ್ಬರೂ ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

Spread the love

Leave a Reply

Your email address will not be published. Required fields are marked *

error: Content is protected !!